ಗುಜರಾತ್ ನಲ್ಲಿ ‘ಪದ್ಮಾವತ್’ ವಿರುದ್ಧ ಭಾರೀ ಪ್ರತಿಭಟನೆ: ವಿವಿಧೆಡೆ ಬಸ್ ಗಳಿಗೆ ಬೆಂಕಿ

Update: 2018-01-21 13:34 GMT

ಅಹ್ಮದಾಬಾದ್, ಜ.21: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ‘ಪದ್ಮಾವತ್’ ಚಿತ್ರದ ವಿರುದ್ಧ ಗುಜರಾತ್ ನಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದು, ದುಷ್ಕರ್ಮಿಗಳು ಬಸ್ ಗಳಿಗೆ ಬೆಂಕಿ ಹಚ್ಚಿದ್ದಾರೆ.

ಜನವರಿ 25ರಂದು ಈ ಚಿತ್ರ ಬಿಡುಗಡೆಯಾಗಲಿದ್ದು, ವಿವಿಧ ರಾಜ್ಯಗಳಲ್ಲಿ ರಜಪೂತ ಕರ್ಣಿ ಸೇನಾ ‘ಪದ್ಮಾವತ್’ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿದೆ.

ಗುಜರಾತ್ ನ ಗಾಂಧಿನಗರ್. ಮೆಹ್ಸಾನಾ ಹಾಗು ಅಹ್ಮದಾಬಾದ್  ಜಿಲ್ಲೆಗಳಲ್ಲಿ ಬಸ್ ಗಳಿಗೆ ಬೆಂಕಿ ಹಚ್ಚಲಾಗಿದ್ದು, ಚಿತ್ರವನ್ನು ನಿಷೇಧಿಸಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.

ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಅಹ್ಮದಾಬಾದ್ ಪೊಲೀಸ್ ಕಮಿಷನರ್ ಪ್ರಕಟನೆ ಹೊರಡಿಸಿದ್ದು, ಮಲ್ಟಿಪ್ಲೆಕ್ಸ್ ಗಳು, ಮಾಲ್ ಗಳ ಮುಂದೆ ಪ್ರತಿಭಟನೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶಕ್ಕೂ ಮೊದಲು ‘ಪದ್ಮಾವತ್’ ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿದ್ದ 4 ರಾಜ್ಯಗಳಲ್ಲಿ ಗುಜರಾತ್ ಕೂಡ ಇತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News