ಮಹಾದಾಯಿ ವಿವಾದ ಇತ್ಯರ್ಥಕ್ಕೆ ಒತ್ತಾಯ: ಜ.25ಕ್ಕೆ ಕರ್ನಾಟಕ ಬಂದ್ ಗೆ ಕರೆ

Update: 2018-01-21 14:06 GMT

ಬೆಂಗಳೂರು, ಜ. 21: ಮಹಾದಾಯಿ ವಿವಾದ ಇತ್ಯರ್ಥಕ್ಕೆ ಆಗ್ರಹಿಸಿ ಜ.25ಕ್ಕೆ ಕರ್ನಾಟಕ ಬಂದ್, ಫೆ.4ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುವ ಸಂದರ್ಭದಲ್ಲಿ ಬೆಂಗಳೂರು ಬಂದ್ ಕರೆ ನೀಡಲು ಕನ್ನಡಪರ ಸಂಘಟನೆಗಳು ನಿರ್ಧರಿಸಿವೆ.

ರವಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಉತ್ತರ ಕರ್ನಾಟಕ ಭಾಗದ ನಾಲ್ಕೈದು ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವ ಮಹದಾಯಿ ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಬಂದ್ ಕರೆ ನೀಡಲಾಗಿದೆ ಎಂದರು.

ಉತ್ತರ ಕರ್ನಾಟಕದ ರೈತ ಮುಖಂಡರು ಜ.25ರ ಬದಲಿಗೆ ಫೆ.4ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುವ ಸಂದರ್ಭದಲ್ಲಿ ಬಂದ್ ಕರೆ ನೀಡಬೇಕು ಎಂಬ ಷರತ್ತು ವಿಧಿಸಿದ್ದಾರೆ. ಆದರೆ, ಎಲ್ಲರೂ, ಒಗ್ಗಟ್ಟಿನಿಂದ ಮಹಾದಾಯಿ ವಿವಾದ ಇತ್ಯರ್ಥಕ್ಕೆ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

ಜ.25ಕ್ಕೆ ಕರ್ನಾಟಕ ಸಂಪೂರ್ಣ ಬಂದ್, ಫೆ.4ಕ್ಕೆ ಬೆಂಗಳೂರು ಬಂದ್ ಕರೆ ನೀಡಲಾಗುವುದು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಎಲ್ಲರೂ ಬಂದ್‌ಗೆ ಬೆಂಬಲ ನೀಡಬೇಕು. ನಾಡಿನ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಕನ್ನಡಪರ ಸಂಘಟನೆಗಳ ಜತೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News