ಪ್ಲಾಸ್ಟಿಕ್ ಗೋದಾಮಿಗೆ ಬೆಂಕಿ ಅಪಾರ ನಷ್ಟ

Update: 2018-01-21 14:37 GMT

ಬೆಂಗಳೂರು, ಜ.21: ನಾಯಂಡಹಳ್ಳಿಯ ಮೆಟ್ರೋ ನಿಲ್ದಾಣದ ಬಳಿಯಿರುವ ಪ್ಲಾಸ್ಟಿಕ್ ಗೋದಾಮಿಗೆ ರವಿವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಳಗ್ಗೆ 5ರ ವೇಳೆ ನಿರುಪಯುಕ್ತ ಪ್ಲಾಸ್ಟಿಕ್ ವಸ್ತುಗಳನ್ನು ಶೇಖರಿಸಿದ್ದ ಗೋಡಾನ್‌ಗೆ ಬೆಂಕಿ ತಗುಲಿದೆ. ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿಯು ಸ್ವಲ್ಪ ಹೊತ್ತಿನಲ್ಲಿ ಇಡೀ ಗೋದಾಮಿಗೆ ಆವರಿಸಿ ದಟ್ಟ ಹೊಗೆ ಹೊರಬರಲಾಂಭಿಸಿದೆ.

ಸ್ಥಳೀಯರು ಬೆಂಕಿ ಹೊಗೆ ಬರುತ್ತಿರುವುದನ್ನು ಗಮನಿಸಿ ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳದ 6 ವಾಹನಗಳು ಸತತ 5 ಗಂಟೆ ಶ್ರಮಿಸಿ ಬೆಂಕಿ ನಂದಿಸಿ ಗೋದಾಮಿನ ಪಕ್ಕದಲ್ಲಿದ್ದ ಇತರೆ ಅಂಗಡಿಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಿವೆ.

ಗೋದಾಮಿನಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯಿಂದ ನಿರುಪಯುಕ್ತ ಪ್ಲಾಸ್ಟಿಕ್ ವಸ್ತುಗಳು ಪೀಟೋಪಕರಣಗಳು ಸುಟ್ಟು ಹೋಗಿವೆ. ಪ್ರಕರಣ ದಾಖಲಿಸಿರುವ ಬ್ಯಾಟರಾಯನಪುರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News