ಕೆಮ್ತೂರು ತುಳು ನಾಟಕ ಪ್ರಶಸ್ತಿ ಪ್ರದಾನ

Update: 2018-01-21 16:48 GMT

ಉಡುಪಿ, ಜ.21: ಉಡುಪಿ ತುಳುಕೂಟದ ಆಶ್ರಯದಲ್ಲಿ ಕೆಮ್ತೂರು ತುಳು ನಾಟಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರವಿವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿತ್ತು.

ಶಿರೂರು ಮಠಾಧೀಶ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ತುಳು ನಾಟಕ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಅಧ್ಯಕ್ಷತೆಯನ್ನು ತುಳು ಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ಈ ಸಂದರ್ಭದಲ್ಲಿ ಡಾ.ಪಿ.ಕೃಷ್ಣ ಪ್ರಸಾದ್ ಅವರ ‘ಮುಗುರು ತೆಲಿಕೆ’ ತುಳು ಕೃತಿಯನ್ನು ಬಿಡುಗಡೆ ಗೊಳಿಸಲಾಯಿತು.

ಮುಖ್ಯ ಅತಿಥಿಗಳಾಗಿ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾ ಯಕ ನಿರ್ದೇಶಕ ಡಾ.ಬಿ.ದೇವದಾಸ ಪೈ, ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಬಾಸುಮ ಕೊಡಗು, ಉದ್ಯಮಿ ಪುರುಷೋತ್ತಮ ಶೆಟ್ಟಿ, ಚಂದ್ರಹಾಸ ದೇವಾಡಿಗ, ವಿಜಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ತುಳುಕೂಟದ ಉಪಾಧ್ಯಕ್ಷೆ ತಾರಾ ಆಚಾರ್ಯ ಸ್ವಾಗತಿಸಿದರು. ನಾಟಕ ಸ್ಪರ್ಧೆಯ ಸಂಚಾಲಕ ಪ್ರಭಾಕರ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಚೈತನ್ಯ ಎಂ.ಜಿ. ವಿಜೇತರ ಪಟ್ಟಿ ವಾಚಿಸಿದರು. ಕಾರ್ಯದರ್ಶಿ ಗಂಗಾಧರ ಕಿದಿಯೂರು ವಂದಿಸಿದರು. ಯಶೋಧ ೇಶವ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಕೆಮ್ತೂರು ತುಳು ನಾಟಕ ಪ್ರಶಸ್ತಿ ವಿಜೇತ ನೀರೆಬೈಲೂರು ರಂಗ ಸನ್ನಿಧಿ ತಂಡದ ಸುರೇಂದ್ರ ಮೋಹನ್ ಮುದ್ರಾಡಿ ನಿರ್ದೇಶನದ ‘ಸರ್ಪ ಸಂಪಿಗೆ’ ನಾಟಕದ ಮರು ಪ್ರದರ್ಶನ ಜರಗಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News