ಮಾದಕ ವಸ್ತು ಮಾರಾಟ: ಆರೋಪಿಯ ಬಂಧನ

Update: 2018-01-21 17:08 GMT

ಬೆಂಗಳೂರು, ಜ.21: ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿ 35 ಸಾವಿರ ರೂ.ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿರುವ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತನನ್ನು ಇಮ್ರಾನ್(22) ಎಂದು ಗುರುತಿಸಲಾಗಿದೆ. ಆರೋಪಿಯು ಮೈಸೂರು ಮುಖ್ಯ ರಸ್ತೆಯಲ್ಲಿರುವ ಅಶ್ವಥ್‌ಕಟ್ಟೆ ಬಳಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ 1 ಕೆಜಿ 100 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
     

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News