ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ದೇಶ ಬಯಲುಶೌಚ ಮುಕ್ತ: ಕೇಂದ್ರ ಸರಕಾರ

Update: 2018-01-22 06:49 GMT

ಹೊಸದಿಲ್ಲಿ, ಜ.22: ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ದೇಶದ ಪ್ರತಿಯೊಂದು ಮನೆಯಲ್ಲೂ ಶೌಚಾಲಯ ಹೊಂದಲಿದ್ದು, ದೇಶವು ಬಯಲು ಬಹಿರ್ದೆಸೆಯಿಂದ ಮುಕ್ತವಾಗಲಿದೆ ಎಂದು ಸರಕಾರದ ಉನ್ನತ ಮೂಲಗಳು ಮಾಹಿತಿ ನೀಡಿವೆ.

2019ರ ಅಕ್ಟೋಬರ್ ಗೂ ಮೊದಲು ಸಚಿವಾಲಯವು ಈ ಗುರಿಯನ್ನು ತಲುಪಲಿದೆ ಎಂದು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ನಗರ ಹಾಗು ಪಟ್ಟಣಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ನಿರ್ಮಾಣದ ಗುರಿ 11 ಶೇ. ಹೆಚ್ಚಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ಸೌಲಭ್ಯವನ್ನು ಜನರಿಗೆ ಒದಗಿಸುವುದೇ ದೊಡ್ಡ ಸವಾಲಾಗಿದೆ. “ಶೌಚಾಲಯ ನಿರ್ಮಾಣ ಹಾಗು ಜನರ ಅಭಿಪ್ರಾಯವನ್ನು ಬದಲಾಯಿಸುವ ಕಾರ್ಯಕ್ರಮಗಳನ್ನು ನಾವು ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಳ್ಳುತ್ತೇವೆ. ಇದಕ್ಕಾಗಿ ಪ್ರೇರೇಪಕರ, ಸ್ಥಳೀಯ ಸಾಧಕರ ಹಾಗು ಗ್ರಾಮದ ಮುಖಂಡರ ಸಹಾಯವನ್ನು ಪಡೆಯಲಾಗುತ್ತದೆ” ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News