×
Ad

ಪಡುಬಿದ್ರೆ: ಯುಪಿಸಿಎಲ್ ಸ್ಥಾವರಕ್ಕೆ ಸುಧೀರ್ ಶೆಟ್ಟಿ ಭೇಟಿ

Update: 2018-01-22 19:29 IST

ಪಡುಬಿದ್ರೆ, ಜ.22: ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹದ ಯುಪಿಸಿಎಲ್ ವಿದ್ಯುತ್ ಸ್ಥಾವರಕ್ಕೆ ಮುಂಬೈಯ ಚರಿಸ್ಮಾ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸುಧೀರ್ ಶೆಟ್ಟಿ ಜ. 20ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸ್ಥಾವರದ ವಠಾರದಲ್ಲಿ ಸುಧೀರ್ ಗಿಡ ನೆಟ್ಟರು. ಅದಾನಿ ಯುಪಿಸಿಎಲ್‌ನ ಸಾಮಾಜಿಕ ಜವಾಬ್ದಾರಿ ಹೊಣೆಗಾರಿಕೆ ಅಡಿಯಲ್ಲಿ ಸ್ಥಳೀಯ ಗ್ರಾಮಗಳಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸುತ್ತಿರುವುದರಿಂದ ಗ್ರಾಮಸ್ಥರಿಗೆ ಅನುಕೂಲವಾಗಿದೆ ಎಂದು ಅವರು ಹೇಳಿದರು.

ಅದಾನಿ ಸಂಸ್ಥೆಯ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ,, ಯುಪಿಸಿಎಲ್‌ನ ಏಜಿಎಂ ಗಿರೀಶ್ ನಾವಡ, ಹಿರಿಯ ಪ್ರಬಂಧಕ ರವಿ ಜೇರೆ, ಸ್ಥಳೀಯ ಉದ್ಯಮಿ ರಾಜೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News