×
Ad

ಸ್ಯಾನಿಟರಿ ನ್ಯಾಪ್ಕಿನ್ ಮೇಲೆ ಜಿಎಸ್‌ಟಿ: ದಿಲ್ಲಿ, ಬಾಂಬೆ ನ್ಯಾಯಾಲಯದ ವಿಚಾರಣೆಗೆ ತಡೆ

Update: 2018-01-22 20:00 IST

ಹೊಸದಿಲ್ಲಿ, ಜ. 22: ಸ್ಯಾನಿಟರಿ ನ್ಯಾಪ್ಕಿನ್ಗಳ ಮೇಲಿನ ಜಿಎಸ್‌ಟಿ ಕುರಿತು ದಿಲ್ಲಿ ಹಾಗೂ ಬಾಂಬೆ ಉಚ್ಚ ನ್ಯಾಯಾಲಯದಲ್ಲಿರುವ ಪ್ರಕರಣಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

ರಾಜ್ಯ ಉಚ್ಚ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸುವುದನ್ನು ನಿಲ್ಲಿಸಿದ ಬಳಿಕ ಈ ವಿಷಯಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ತಾವು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ದೂರುದಾರರಿಗೆ ಈ ವಿಷಯಕ್ಕೆ ಸಂಬಂಧಿಸಿ ನೋಟಿಸು ಜಾರಿ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಮಹಿಳೆಯರಲ್ಲಿ ನೈರ್ಮಲ್ಯ ಉತ್ತೇಜಿಸುವ ಪ್ರಯತ್ನವಾಗಿ ಸ್ಯಾನಿಟರಿ ನ್ಯಾಪ್ಕಿನ್ ಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರಾದ್ಯಂತ ತೀವ್ರ ಪ್ರತಿಭಟನೆ ನಡೆದಿತ್ತು.

ನ್ಯಾಪ್ಕಿನ್ ಮೇಲಿನ ಜಿಎಸ್‌ಟಿ ಹಿಂದೆಗೆಯುವಂತೆ ಹಾಗೂ ಉಚಿತ ವಾಗಿ ನೀಡುವಂತೆ ಈ ಹಿಂದೆ ಗ್ವಾಲಿಯರ್ ವಿದ್ಯಾರ್ಥಿನಿಯರು ನ್ಯಾಪ್ಕಿನ್ ಮೂಲಕ ಸಂದೇಶ ಬರೆದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News