'ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾಕ್ಕೆ ಸಿಎಂಗೆ ಮನವಿ'
ಶಿರ್ವ, ಜ.22: ಅವಿಭಜಿತ ಜಿಲ್ಲೆಯ ಸಹಕಾರಿ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮತ್ತು ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಲಾಗಿದ್ದು, ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ಹೇಳಿದ್ದಾರೆ.
ಶಿರ್ವ ಮುಖ್ಯ ರಸ್ತೆಯ ಬಹರೈನ್ ಕಟ್ಟಡಕ್ಕೆ ಸ್ಥಳಾಂತರಗೊಂಡ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಶಿರ್ವ ಶಾಖೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಶಿರ್ವ ಶಾಖೆಯಲ್ಲಿ 23.5 ಕೋಟಿ ರೂ. ಠೇವಣಿ ಇದ್ದು, 7.72 ಕೋಟಿ ರೂ. ಸಾಲ ನೀಡಲಾಗಿದೆ. 106 ಸ್ವಸಹಾಯ ಸಂಘಗಳು, 286 ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್, 415 ರೂಪೆ ಡೆಬಿಟ್ ಕಾರ್ಡ್‌ಗಳನ್ನು ವಿತರಿಸ ಲಾಗಿದೆ. ರೈತರಿಗೆ 89.45 ಲಕ್ಷ ರೂ. ಬೆಳೆ ಸಾಲ ನೀಡಲಾಗಿದೆ. ಉಡುಪಿ ತಾಲೂಕಿನ ಎಲ್ಲಾ ಸ್ವ ಸಹಾಯ ಗುಂಪುಗಳಿಗೆ ಜ.26ರಂದು ಸೀರೆ ವಿತರಿಸಲಾ ಗುವುದು ಎಂದರು.
ಕಾಪು ಶಾಸಕ ವಿನಯಕುಮಾರ್ ಸೊರಕೆ ಮಾತನಾಡಿದರು. ಈ ಸಂದರ್ಭ ದಲ್ಲಿ ಕಟ್ಟಡದ ಮಾಲಕಿ ಮುತ್ತು ಪೂಜಾರ್ತಿ, ಶಿರ್ವ ಶಾಖೆಯ ಶಾಖಾ ವ್ಯವಸ್ಥಾಪಕ ಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು. ಅಮ್ಮ ಸ್ವಸಹಾಯ ಗುಂಪನ್ನು ಉದ್ಘಾಟಿಸಲಾಯಿತು.
ಜಿಪಂ ಸದಸ್ಯ ವಿಲ್ಸನ್ ರಾಡ್ರಿಗಸ್, ತಾಪಂ ಸದಸ್ಯೆ ಗೀತಾ ವಾಗ್ಲೆ, ಶಿರ್ವ ಗ್ರಾಪಂ ಅಧ್ಯಕ್ಷೆ ವಾರಿಜ ಪೂಜಾರ್ತಿ, ಎಸ್‌ಡಿಸಿಸಿ ಬ್ಯಾಂಕ್‌ನ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಎಸ್., ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ, ಎಂ.ವಾದಿರಾಜ ಶೆಟ್ಟಿ, ರಾಜೇಶ್ ರಾವ್ ಪಾಂಗಾಳ, ಉಡುಪಿ ಟೌನ್ ಕೋ ಅಪರೇಟಿವ್ ಅಧ್ಯಕ್ಷ ಕೆ.ಕೆ.ಸರಳಾಯ, ಪ್ರಧಾನ ವ್ಯವಸ್ಥಾಪಕ ಲಕ್ಷ್ಮೀನಾರಾ ಯಣ ರಾವ್, ಬಡಗಬೆಟ್ಟು ಕೊಅಪರೇಟಿವ್ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗ್ರೆಗರಿ ಕೊನ್ರಾಡ್ ಕ್ಯಾಸ್ತಲಿನೋ, ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಿವಾಜಿ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಸಹಕಾರಿ ಬ್ಯಾಂಕ್‌ಗಳ ವ್ಯವಹಾರಗಳ ಮೇಲೆ ಆದಾಯ ತೆರಿಗೆ ಇಲಾಖೆ ನಿಗಾ ವಹಿಸಿರುವುದರಿಂದ ಜನ ಸಾಮಾನ್ಯರು ವಹಿವಾಟು ಮಾಡಲು ಭಯ ಪಡುವಂತಾಗಿದೆ. ಕೇಂದ್ರ ಸರಕಾರವು ದೇಶದ ವಾಣಿಜ್ಯ ಬ್ಯಾಂಕ್‌ಗಳ ನಷ್ಟವನ್ನು ಹೊಂದಾಣಿಕೆ ಮಾಡಲು 10 ಲಕ್ಷ ಕೋಟಿ ರೂ. ಹಣವನ್ನು ನೀಡಿದೆ. ಆದರೆ ಒಂದೇ ಒಂದು ಸಹಕಾರಿ ಬ್ಯಾಕ್‌ಗಳಿಗೆ ನಯಾ ಪೈಸೆ ಕೂಡ ನೀಡಿಲ್ಲ ಎಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಆರೋಪಿಸಿದರು.