ಜ.31 ರಂದು ಬೆಳದಿಂಗಳ ತುಳು ಸಾಹಿತ್ಯ ಸಮ್ಮೇಳನ
ಬೆಂಗಳೂರು, ಜ.22: ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ವತಿಯಿಂದ ರಾಜ್ಯಮಟ್ಟದ ಬೆಳದಿಂಗಳ ತುಳು ಸಾಹಿತ್ಯ ಸಮ್ಮೇಳನವನ್ನು ಜ.31 ರಂದು ಮೂಡಬಿದರೆಯ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಬಯಲು ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಶೇಖರ ಆಜೆಕಾರು, ಕನ್ನಡ ಸಾಹಿತ್ಯ ಪರಿಷತ್ತು ಅಜೆಕಾರು ಹೋಬಳಿ ಘಟಕದ ಸಹಕಾರದೊಂದಿಗೆ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದ್ದು, ಇದನ್ನು ಸಮಾಜ ಸೇವಕ ಕಡಂದಲ್ಲೇ ಸುರೇಶ್ ಉದ್ಘಾಟಿಸಲಿದ್ದಾರೆ. ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ಸಮ್ಮೇಳನದಲ್ಲಿ ತುಳು ಭಾಷೆಯ ವೈವಿದ್ಯ ಕುರಿತು ವಿಚಾರಗೋಷ್ಠಿ, ಕವಿಗೋಷ್ಠಿ, ಮಕ್ಕಳ ಪ್ರತಿಭಾ ಪ್ರದರ್ಶನ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ. ಇದೇ ಕಾರ್ಯಕ್ರಮದಲ್ಲಿ 28 ಬಾಲ ಪ್ರತಿಭೆಗಳಿಗೆ ಪ್ರತಿಭಾ ರತ್ನ ಪ್ರಶಸ್ತಿ, 22 ಮಂದಿ ಯುವ ಸಾಧಕರನ್ನು ಗೌರವಿಸಲಾಗುತ್ತದೆ. ಹಾಗೂ ಇದೇ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಗೆ ಶತಮಾನದ ವಿಶ್ವ ತುಳು ಗೌರವವನ್ನು ಸಮರ್ಪಿಸಲಾಗುತ್ತದೆ ಎಂದು ವಿವರಿಸಿದರು.