ಬಿಜೆಪಿ ಮೈತ್ರಿ ಮುರಿದ ಶಿವಸೇನೆ: 2019ರ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

Update: 2018-01-23 09:02 GMT

ಮುಂಬೈ, ಜ.23: 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಶಿವಸೇನೆ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಮುಂಬೈನಲ್ಲಿ ಮಂಗಳವಾರ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಶಿವಸೇನೆ ಈ ನಿರ್ಧಾರ ತೆಗೆದುಕೊಂಡಿದೆ. ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಂಡು 2019ರ ಲೋಕಸಭಾ ಚುನಾವಣೆ ಹಾಗೂ ಅಸೆಂಬ್ಲಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಶಿವಸೇನೆ ಪಕ್ಷ ಬಿಜೆಪಿಯ ಹಳೆಯ ಮೈತ್ರಿ ಪಕ್ಷವಾಗಿದ್ದು ಕಳೆದ ಕೆಲವು ಸಮಯದಲ್ಲಿ ಈ ಎರಡು ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ತಲೆದೋರಿತ್ತು. ಶಿವಸೇನೆ  ಮುಖ್ಯಸ್ಥ ಉದ್ಧವ್ ಠಾಕ್ರೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರದ ಕಾರ್ಯವೈಖರಿಯನ್ನು ಸದಾ ಟೀಕಿಸುತ್ತಾ ಬಂದಿದ್ದಾರೆ. ರಾಜ್ಯದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ ಬಿಜೆಪಿಯನ್ನು ಟೀಕಿಸುತ್ತಾ ಬಂದಿದ್ದಾರೆ.

ಕಳೆದ ಮಹಾರಾಷ್ಟದ ಅಸೆಂಬ್ಲಿ ಚುನಾವಣೆ ಹಾಗೂ ಬೃಹನ್ಮುಂಬಯಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನೆ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಈ ಹಿನ್ನೆಲೆಯಲ್ಲಿ ಶಿವಸೇನೆಯ ನಿರ್ಧಾರ ಅಚ್ವರಿ ತಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News