ಕೋಡಿ ಬ್ಯಾರೀಸ್‌ನಲ್ಲಿ ಮಹಿಳಾ ದೌರ್ಜನ್ಯದ ವಿರುದ್ಧ ಕಾನೂನಿನ ಅರಿವು ಕಾರ್ಯಕ್ರಮ

Update: 2018-01-23 08:29 GMT

ಕೋಡಿ, ಜ. 23: ಬ್ಯಾರೀಸ್ ಪದವಿ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯದ ವಿರುದ್ಧ ಕಾನೂನಿನ ಅರಿವು ಕಾರ್ಯಕ್ರಮ ನಡೆಯಿತು.

ಈ ಬಗ್ಗೆ ಹಿರಿಯ ವಕೀಲರಾದ ಶರತ್‌ಕುಮಾರ್ ಶೆಟ್ಟಿ, ಕುಂದಾಪುರ ಅವರು ಮಾತನಾಡಿ, ಸಮಾಜದಲ್ಲಿ ದಿನನಿತ್ಯ ನಡೆಯುತ್ತಿರುವ ಮಹಿಳಾ ದೌರ್ಜನ್ಯಕ್ಕೆ ಕಾರಣಗಳನ್ನು ಚರ್ಚಿಸಿ ಹಾಗೂ ಮಹಿಳೆಯರ ಸ್ಥಾನಮಾನವನ್ನು ಉನ್ನತೀಕರಿಸುವ ಬಗ್ಗೆ ಮಾರ್ಗದರ್ಶನವನ್ನು ನೀಡಿದರು. ಅಪ್ರಾಪ್ತತ ವಯಸ್ಸಿನ ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಕ್ರಮಕೈಗೊಳ್ಳಲು 2012ರಲ್ಲಿ ಜಾರಿಗೆ ಬಂದ ಪೋಕ್ಸೊ ಕಾಯಿದೆಯ ಬಗ್ಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 

ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥೆ ಹರ್ಷಿತಾ, ಜಿ.ಪಿ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ಸುಹಾನಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಫರಾಝ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News