ದ.ಕ. ಜಿಲ್ಲೆಯಲ್ಲಿ ನೂತನ ಕಣ್ಣಿನ ಬ್ಯಾಂಕ್ ಗೆ ಪ್ರಸ್ತಾವನೆ

Update: 2018-01-23 12:50 GMT

ಮಂಗಳೂರು, ಜ. 23: ದ.ಕ. ಜಿಲ್ಲೆಯ ವೆನ್ಲಾಕ್  ಜಿಲ್ಲಾ ಆಸ್ಪತ್ರೆಯಲ್ಲಿ ಕಣ್ಣಿನ ಬ್ಯಾಂಕ್ ನಿರ್ಮಿಸಲು ಸರಕಾರ ಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದ್ದಾರೆ

ಅವರು ದ.ಕ ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡ ಕಾರ್ಯ ಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ದ.ಕ. ಜಿಲ್ಲೆಯಲ್ಲಿ ಕೇವಲ 9 ತಿಂಗಳಲ್ಲಿ 12,405 ಮಂದಿ ನೇತ್ರದಾನ ಮಾಡಿ ರಾಜ್ಯದಲ್ಲಿಯೇ ಮಹತ್ವದ ಸಾಧನೆಯಾಗಿದೆ. ಬುದ್ದಿವಂತರ ಜಿಲ್ಲೆಯ ಜನರು ಹೃದಯವಂತರು ಎನ್ನುವುದನ್ನು ರಾಜ್ಯಕ್ಕೆ ತೋರಿಸಿದ್ದಾರೆ ಎಂದು ರವಿ ತಿಳಿಸಿದ್ದಾರೆ.

ಸಮಾರಂಭವನ್ನು ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿ ಗೋಡು ಉದ್ಘಾಟಿಸಿದರು. ಸಮಾಜದಲ್ಲಿ ಜಿಲ್ಲಾ ಅಂದತ್ವ ನಿವಾರಣ ವಿಭಾಗದ ಅಧಿಕಾರಿ ಡಾ. ರತ್ನಾಕರ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ ರಾವ್, ಪ್ರಭಾರ ವೈದ್ಯಾಧಿಕಾರಿ ಡಾ. ಜೆಸಿಂತಾ, ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ, ಮಂಗಳೂರು ವಕೀಲರ ಸಂಘದ ಕಾರ್ಯದರ್ಶಿ ದಿನಕರ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News