ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: 7.22 ಲಕ್ಷ ರೂ.ವಸೂಲಿ

Update: 2018-01-23 12:57 GMT

ಬೆಂಗಳೂರು, ಜ.23: ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 5697 ಪ್ರಯಾಣಿಕರಿಂದ 7.22ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ.
ಡಿಸೆಂಬರ್‌ನಲ್ಲಿ ಕೆಎಸ್ಸಾರ್ಟಿಸಿಯ ತನಿಖಾ ತಂಡಗಳು 47866 ಬಸ್‌ಗಳನ್ನು ತನಿಖೆಗೊಳಪಡಿಸಿ 5027 ಪ್ರಕರಣಗಳನ್ನು ದಾಖಲಿಸಿ, 5697 ಟಿಕೆಟ್ ರಹಿತ ಪ್ರಯಾಣಿರಿಂದ ದಂಡವನ್ನು ವಸೂಲಿ ಮಾಡಲಾಗಿದೆ. ಹಾಗೂ ಕೆಎಸ್ಸಾರ್ಟಿಸಿ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ 88,400ರೂ.ವನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್, ಪಾಸ್ ಪಡೆದು ಪ್ರಯಾಣ ಮಾಡಬೇಕೆಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News