ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ಆಪ್ ಶಾಸಕರು

Update: 2018-01-23 15:47 GMT

ಹೊಸದಿಲ್ಲಿ, ಜ. 23: ಲಾಭದಾಯಕ ಹುದ್ದೆ ಹೊಂದಿದ ಆರೋಪದಲ್ಲಿ ಚುನಾವಣಾ ಆಯೋಗ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಆಪ್‌ನ ಶಾಸಕರು ಮಂಗಳವಾರ ದಿಲ್ಲಿ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ಹಾಗೂ ಎ.ಕೆ. ಚಾವ್ಲಾ ಅವರನ್ನು ಒಳಗೊಂಡ ಪೀಠದ ಮುಂದೆ ಅನರ್ಹಗೊಂಡ ಆಪ್ ಶಾಸಕರು ತಮ್ಮ ಪ್ರಕರಣದ ತುರ್ತು ಉಲ್ಲೇಖ ಮಾಡಿದರು.

ಲಾಭದಾಯಕ ಹುದ್ದೆ ಹೊಂದಿರುವ ಆರೋಪದಲ್ಲಿ ಚುನಾವಣಾ ಆಯೋಗ ತಮ್ಮನ್ನು ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಆಪ್ ಶಾಸಕರು ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮನವಿಯನ್ನು ಹಿಂದೆ ತೆಗೆದುಕೊಂಡ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಲಾಭದಾಯಕ ಹುದ್ದೆಯಾದ ಸಂಸದೀಯ ಕಾರ್ಯದರ್ಶಿ ಹುದ್ದೆ ಹೊಂದಿರುವ ಕಾರಣಕ್ಕೆ ವಿಧಾನ ಸಭೆಯ ಆಪ್‌ನ 20 ಶಾಸಕರನ್ನು ಅನರ್ಹಗೊಳಿಸುವಂತೆ ಶಿಫಾರಸು ಮಾಡಿ ಜನವರಿ 19ರಂದು ಚುನಾವಣಾ ಆಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ಗೆ ಶಿಫಾರಸು ಮಾಡಿತ್ತು. ಇದಕ್ಕೆ ರಾಷ್ಟ್ರಪತಿ ಅವರು ರವಿವಾರ ಒಪ್ಪಿಗೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News