ಸಿದ್ಧಕಟ್ಟೆಯಲ್ಲಿ ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2018-01-23 22:14 IST
ಬಂಟ್ವಾಳ, ಜ. 23: ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸಹ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ತಾಲೂಕಿನ ಸಿದ್ಧಕಟ್ಟೆ ಸಮೀಪದ ತಿರುವು ರಸ್ತೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮೃತರನ್ನು ಇಲ್ಲಿನ ಗುಣಶ್ರೀ ವಿದ್ಯಾಲಯ ಸಮೀಪದ ಶೆಟ್ಟಿಬೆಟ್ಟು ನಿವಾಸಿ ರಮೇಶ ಆಚಾರ್ಯ ಎಂಬವರ ಪುತ್ರ ಅವಿನಾಶ್ (17) ಎಂದು ಗುರುತಿಸಲಾಗಿದೆ.
ರಮೇಶ ಆಚಾರ್ಯ ಅನಾರೋಗ್ಯ ಪೀಡಿತರಾಗಿದ್ದು, ಇವರ ಏಕೈಕ ಪುತ್ರ ಅವಿನಾಶ್ ಮರದ ಕೆತ್ತನೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಇಲ್ಲಿನ ಕುದ್ಕೋಳಿ ಕಡೆಯಿಂದ ಅವರು ಮಂಗಳವಾರ ಸಂಜೆ ದ್ವಿಚಕ್ರ ವಾಹನದಲ್ಲಿ ಸ್ನೇಹಿತರೊಂದಿಗೆ ಮನೆಗೆ ಬರುತ್ತಿದ್ದ ವೇಳೆ ಮೂಡುಬಿದಿರೆಯಿಂದ ಬಂಟ್ವಾಳ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟರು ಎಂದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪುಂಜಾಲಕಟ್ಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.