ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರೀಕರಣ; ಕ್ರಮಕ್ಕೆ ಒತ್ತಾಯಿಸಿ ಆಯುಕ್ತರಿಗೆ ಮನವಿ

Update: 2018-01-23 17:13 GMT

ಮಂಗಳೂರು, ಜ. 23: ಒಂದು ಧರ್ಮದ ಆರಾಧನೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶ್ಲೀಲವಾಗಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮತ್ತು ರಾಜ್ಯ ಯುವ ಕಾಂಗ್ರೆನ್ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಸಾಮಾಜಿಕ ಜಾಲತಾಣಗಳಲ್ಲಿ ಅಲ್ಲಾಹ ನಾಮವನ್ನು, ಇಸ್ಲಾಮ್ ಧರ್ಮದ ಪ್ರಮುಖ ಆರಾಧನಾ ಕರ್ಮವಾದ ನಮಾಝ್ ಮತ್ತು ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶ್ಲೀಲವಾಗಿ ಚಿತ್ರೀಕರಿಸಿ, ಅದನ್ನು ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ ಹಾಕಿ ಸಮಾಜದ ಶಾಂತಿ ಕದಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭ  ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್ ಬುಡ್ಲೆಗುತ್ತು, ಪ್ರಸಾದ್‌ ಮಲ್ಲಿ, ವರುಣ್ ಅಂಬಾಟ್, ಜಿಲ್ಲಾ ಕಾರ್ಯದರ್ಶಿ ಮಹೇಶ್ ಬಂಟ್ವಾಳ, ಶಬೀರ್ ಕೆಂಪಿ, ಸೌಹಾನ್, ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಗಿರೀಶ್ ಆಳ್ವ, ಚಂದ್ರಹಾಸ್ ಸನಿಲ್, ಯು.ಟಿ. ತೌಸಿಫ್, ಅಭಿನಂದನ್ ಹರೀಶ್, ರಮಾನಂದ ಪೂಜಾರಿ, ಆಶ್ರಫ್ ಅಡ್ಯಾರ್, ಯುವ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಅನ್ಸಾರುದ್ದೀನ್ ಸಾಲ್ಮರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News