ಭಟ್ಕಳ: ರೋಟರಿ ಹೊಲಿಗೆ ತರಬೇತಿ ಶಿಬಿರಕ್ಕೆ ಚಾಲನೆ
Update: 2018-01-23 22:45 IST
ಭಟ್ಕಳ, ಜ. 23: ರೋಟರಿ ಕ್ಲಬ್ ಭಟ್ಕಳ ಹಾಗೂ ಭಟ್ಕಳ ಎಜುಕೇಶನ ಟ್ರಸ್ಟ್ ಸಹಭಾಗಿತ್ವದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಹೊಲಿಗೆ ತರಬೇತಿ ಕೇಂದ್ರದಲ್ಲಿ ಪ್ರಥಮ ಬ್ಯಾಚ್‌ಗೆ ವಿದ್ಯಾಭಾರತಿ ಶಾಲೆಯ ಮುಖ್ಯಾಧ್ಯಾಪಕಿ ರೂಪಾ ರಮೇಶ ಖಾವಿ ಸಾಂಕೇತಿಕವಾಗಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮಹಿಳೆಯರಿಗೆ ಹೊಲಿಗೆ ಕ್ಷೇತ್ರದಲ್ಲಿ ಹೇರಳ ಉದ್ಯೋಗಾವಕಾಶಗಳಿದ್ದು, ಈ ಸಂಸ್ಥೆಯ ಪ್ರಯೋಜನವನ್ನು ಪಡೆದು ಸ್ವ-ಉದ್ಯೋಗವನ್ನು ಪ್ರಾರಂಭಿಸುವಂತೆ ಪ್ರೇರೆಪಿಸಿದರು.
ಹೊಲಿಗೆ ಶಿಕ್ಷಕಿಯಾದ ಶಾಂತಿ ವಿ ನಾಯ್ಕ ಹೊಲಿಗೆ ಕಿಟ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ರೋಟರಿ ಹಾಗೂ ರೊಟಾಕ್ಟ್ ಸದಸ್ಯರು ಉಪಸ್ಥಿತರಿದ್ದರು.