×
Ad

ಪರಿವರ್ತನಾ ಯಾತ್ರೆ ಸಂದರ್ಭ ಕಪ್ಪು ಬಾವುಟ ಪ್ರದರ್ಶನ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Update: 2018-01-24 19:06 IST

ಮಡಿಕೇರಿ, ಜ.24 :ಮಡಿಕೇರಿಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ನಡೆಯುತ್ತಿದ್ದ ಸಂದರ್ಭ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. 

ಮಹದಾಯಿ ವಿಚಾರ, ಕೋಮುವಾದಿ ಧೋರಣೆ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ದೇಶದ ಸಂವಿಧಾನದ ವಿರುದ್ದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಗೊಂದಲ ಸೃಷ್ಟಿಯಾಗಿ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹನೀಫ್ ಸಂಪಾಜೆ, ಪ್ರಧಾನ ಕಾರ್ಯದರ್ಶಿಗಳಾದ ಶಾಫಿ ಕೊಟ್ಟಮುಡಿ, ರೆಜಿತ್ ಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News