ಚಿಕ್ಕಮಗಳೂರು: ಜ.25ರಂದು ಶಾಲಾ-ಕಾಲೇಜುಗಳಿಗೆ ರಜೆ

Update: 2018-01-24 16:06 GMT

ಚಿಕ್ಕಮಗಳೂರು, ಜ.24: ಮಹದಾಯಿ ಮತ್ತು ಕಳಸಾ ಬಂಡೂರಿ ಹೋರಾಟಗಾರ ಬಂದ್ ಕರೆಯಿಂದ ಮುಂಜಾಗ್ರತಾ ಕ್ರಮವಾಗಿ ಜ.25ರಂದು ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಉಪ ನಿರ್ದೇಶಕರು ಸ್ಥಳೀಯ ವಿದ್ಯಾಮಾನಗಳನ್ನು ಆಧರಿಸಿ, ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ, ಖಾಸಗಿ ಪ್ರಾಥಮಿಕ ಮತ್ತು ಪ್ರೌಡಶಾಲೆಗಳಿಗೆ ರಜೆ ನೀಡುವ ಬಗ್ಗೆ ಅನುಮತಿ ಕೇಳಿದ್ದರು.

ಆದ್ದರಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ಆದೇಶ ಹೊರಡಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News