ಮಂಗಳೂರು: ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್‌ಗೆ ರಾಷ್ಟ್ರಪತಿ ಪದಕ
Update: 2018-01-24 21:49 IST
ಮಂಗಳೂರು, ಜ.24: ಗಣರಾಜ್ಯೋತ್ಸವದ ಸಂದರ್ಭ ಪೊಲೀಸ್ ಇಲಾಖೆಯಲ್ಲಿ ದಕ್ಷ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಆಯ್ಕೆಯಾಗಿದ್ದಾರೆ.
ಸೇವಾ ಅವಧಿಯಲ್ಲಿ ನಿರ್ವಹಿಸಿದ ದಕ್ಷತೆಯನ್ನು ಪರಿಗಣಿಸಿ ಈ ಪದಕ ನೀಡಲಾಗುತ್ತಿದೆ. ಅದರಂತೆ ರಾಜ್ಯದಿಂದ ಈ ಪದಕಕ್ಕೆ ಆಯುಕ್ತ ಟಿ.ಆರ್. ಸುರೇಶ್ ಸಹಿತ ಮೂವರಿಗೆ ಲಭಿಸಿದೆ.
ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಶೂಟೌಟ್ ಪ್ರಕರಣದ ಆರೋಪಿಗಳನ್ನು, ದೀಪಕ್ ರಾವ್ ಹಾಗೂ ಬಶೀರ್ ಹತ್ಯೆ ಪ್ರಕರಣದ ಆರೋಪಿಗಳ ಸೆರೆ ಸಹಿತ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಟಿ. ಆರ್.ಸುರೇಶ್ ಪ್ರಮುಖ ಪಾತ್ರ ವಹಿಸಿದ್ದರು.