×
Ad

ಹನೂರು: ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ

Update: 2018-01-25 17:17 IST

ಹನೂರು,ಜ.25: ಮಹಾದಾಯಿ ವಿವಾದ ವಿಚಾರವಾಗಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಹನೂರು ಪಟ್ಟಣದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ವ್ಯಾಪಾರ ವಹಿವಾಟುಗಳು ಯಾವುದೇ ಅಡಚಣೆಗಳಿಲ್ಲದೆ ನಡೆದವು. ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳು ಮತ್ತು ಖಾಸಗಿ ಶಾಲೆಗಳು ಹಾಗೂ ಬ್ಯಾಂಕುಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಸರ್ಕಾರಿ ಕಚೇರಿಗಳಿ ತೆರೆದಿದ್ದವಾದರೂ ಬೆರಳೆಣೆಕೆಯಷ್ಟು ಅಧಿಕಾರಿಗಳು ಮಾತ್ರ ಆಗಮಿಸಿ ಕಾರ್ಯ ಚಟುವಟಿಕೆಗಳಲ್ಲಿ ನಿರತರಾಗಿದ್ದರು.

ವಾಹನ ಸಂಚಾರ ವಿರಳ: ಕರ್ನಾಟಕ ಬಂದ್‍ಗೆ ಕರಾರಸಾಸಂ ಬೆಂಬಲ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಕರಾರರಸಾಸಂ ವಾಹನಗಳು ರಸ್ತೆಗಿಳಿಯಲಿಲ್ಲ. ಖಾಸಗಿ ಬಸ್‍ಗಳು ಕೂಡ ಸಂಚಾರ ಕೂಡ ಸ್ಥಗಿತಗೊಳಿಸಿದ್ದವು. ಪರಿಣಾಮ ಶಾಲಾ ಕಾಲೇಜುಗಳಿಗೆ ಆಗಮಿಸಬೇಕಿದ್ದ ವಿದ್ಯಾರ್ಥಿಗಳು ಪರದಾಡುವಂತಾಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News