ಕಾವಳಕಟ್ಟೆ ಉರ್ದು ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ
ಬಂಟ್ವಾಳ, ಜ. 25: ತಾಲೂಕಿನ ಕಾವಳಕಟ್ಟೆಯ ದ.ಕ.ಜಿ.ಪಂ ಉರ್ದು ಹಿ.ಪ್ರಾ. ಶಾಲೆಯಲ್ಲಿ ಇತ್ತೀಚೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆಯನ್ನು ವಹಿಸಿದ್ದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಸರಕಾರಿ ಶಾಲೆಯಲ್ಲಿ ಶಿಕ್ಷಣದ ಗುಣಮಟ್ಟ ಕಾಯ್ದುಕೊಳ್ಳಲು ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಕರೆ ನೀಡಿದರು. ಶಾಲೆಯಲ್ಲಿ ಕೊಠಡಿಗಳ ಸಂಖ್ಯೆ ಕಡಿಮೆ ಇರುವುದನ್ನು ಗಮನಿಸಿದ ಅವರು, ಸರಕಾರದ ವತಿಯಿಂದ ಶಾಲೆಯನ್ನು ಅಭಿವೃದ್ಧಿಪಡಿಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಶಾಲಾ ಸ್ಥಾಪಕಾಧ್ಯಕ್ಷ ಮೌಲಾನಾ ಮುಹಮ್ಮದ್ ಹುಸೈನ್ ಸಾಖವಿ ಬಾಖವಿ ಮಾತನಾಡಿ, ಶಾಲೆಯು ಸ್ಥಾಪನೆಯಾಗಿ 43 ವರ್ಷಗಳು ಸಂದವು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದ್ದರೂ ಇನ್ನೂ ಪ್ರಾಥಮಿಕ ಶಾಲೆಯಾಗಿಯೇ ಉಳಿದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸರಕಾರದ ವತಿಯಿಂದ ಶಾಲೆ ಯಲ್ಲಿ ಪ್ರೌಢಶಿಕ್ಷಣ ನೀಡಲು ಎಲ್ಲ ರೀತಿಯಲ್ಲಿ ಸಹಕರಿಸಬೇಕೆಂದು ಸಚಿವರಲ್ಲಿ ವಿನಂತಿಸಿದರು.
ಕಾರ್ಯಕ್ರಮದಲ್ಲಿ, ಇಸ್ಮಾಯಿಲ್ ಸಿದ್ದೀಕ್, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಗಫೂರ್ ಮತ್ತು ಶಹಾಬುದ್ದೀನ್, ಶಿಕ್ಷಕ ಹಾರೀಸ್, ಶಿಕ್ಷಕಿ ಜಮೀಲಾರವರನ್ನು ಸನ್ಮಾನಿಸಲಾಯಿತು.
ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಲ್ ಖಾದಿಸಾ ನಿರ್ದೇಶಕ ಮೌಲಾನಾ ಫಾಝಿಲ್ ರಝ್ವಿ, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಪಂ ಸದಸ್ಯರಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಹಿದಾಯ ಫೌಂಡೇಶನ್ ಅಧ್ಯಕ್ಷ ಮುಹಮ್ಮದ್ ಹನೀಫ್, ಧನಲಕ್ಷ್ಮೀ ಬಂಗೇರ, ಸಂತೋಷ್ ಪೂಂಜ, ಚಂದ್ರಾವತಿ, ಮಾಯಿಲಪ್ಪ ಸಾಲ್ಯಾನ್, ಅಬ್ದುಲ್ ನಝೀರ್, ಚಂಪಾ ಸುರೇಶ್, ಪೂವಕ್ಕ, ಹನೀಫ್, ಲೈಖ್ ಅಹ್ಮದ್ ರಝ್ವಿ, ಶೇಖ್ ರಹ್ಮತುಲ್ಲಾ ಮುಖ್ಯ ಶಿಕ್ಷಕ ಹಸನ್ ಸಾಬ್ ಮತ್ತು ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಖಲೀಲ್ ಅಹ್ಮದ್, ಉಪಾಧ್ಯಕ್ಷೆ ಸಂಶುನ್ನಿಸಾ, ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.