ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
Update: 2018-01-25 18:40 IST
ಮಂಗಳೂರು, ಜ. 25: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ.
ಆಳ್ವಾಸ್ ಕಾಲೇಜಿನಲ್ಲಿ ಪಿಯು ಕಲಿಯುತ್ತಿದ್ದ ಚಿತ್ರದುರ್ಗದ ರಚನಾ (18) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಗುರುವಾರ ಬೆಳಗ್ಗೆ ಕಾಲೇಜಿನ 5ನೆ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿಡಲಾಗಿದೆ.
ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.