×
Ad

ಸೀಟ್ ಬೆಲ್ಟ್ ಕಟ್ಟದಿರುವುದಕ್ಕೆ ದಂಡ: ಆತ್ಮಾಹುತಿಗೆ ಯತ್ನಿಸಿದ ಕ್ಯಾಬ್ ಚಾಲಕ

Update: 2018-01-25 22:22 IST

ಚೆನ್ನೈ, ಜ. 25: ಸೀಟ್ ಬೆಲ್ಟ್ ಧರಿಸದಿರುವುದಕ್ಕೆ ಸ್ಥಳದಲ್ಲೇ ದಂಡ ವಿಧಿಸಿದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸ್‌ರೊಂದಿಗೆ ವಾಗ್ವಾದ ನಡೆಸಿದ ಬಳಿಕ 21 ವರ್ಷದ ಕ್ಯಾಬ್ ಚಾಲಕನೋರ್ವ ಸಾರ್ವಜನಿಕವಾಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಚೆನ್ನೈಯಲ್ಲಿ ಬುಧವಾರ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮಣಿಕಂಠನ್ ಎಂದು ಗುರುತಿಸಲಾಗಿದೆ. ಆತನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಯಲ್ಲಿರುವ ಆತ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿರುನಲ್ವೇಲಿ ಜಿಲ್ಲೆಯ ನಿವಾಸಿಯಾಗಿರುವ ಮಣಿಕಂಠನ್ ರಾಜೀವ್ ಗಾಂಧಿ ಸಲಾಯ್‌ಯಲ್ಲಿ ಕ್ಯಾಬ್ ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಕಟ್ಟಿಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ

ಆದಾಗ್ಯೂ ಚಾಲಕ ದಂಡ ಪಾವತಿಸಿದ್ದಾನೆ. ಅದೇ ರೀತಿ ಸಂಚಾರಿ ಪೊಲೀಸ್‌ರೊಂದಿಗೆ ವಾಗ್ವಾದ ನಡೆಸಿದ್ದಾನೆ. ಪೊಲೀಸ್ ಕಿರುಕುಳ ನೀಡುತ್ತಿರುವುದನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಪ್ರಯತ್ನಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News