ಅವಧಿ ಮುಕ್ತಾಯ: ಏಳು ಗ್ರಾ.ಪಂ.ಗಳಿಗೆ ಫೆ.18 ಕ್ಕೆ ಚುನಾವಣೆ

Update: 2018-01-25 18:13 GMT

ಬೆಂಗಳೂರು, ಜ. 25: ಅವಧಿ ಮುಕ್ತಾಯಗೊಳ್ಳಲಿರುವ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಪುದು, ಹಾಸನ ಜಿಲ್ಲೆ ಸಕಲೇಶಪುರದ ವಣಗೂರು, ಉಚ್ಚಂಗಿ, ದಾವಣಗೆರೆಯ ಹರಪ್ಪನಹಳ್ಳಿಯ ಹಾರಕನಾಳು ಗ್ರಾ.ಪಂ.ಸೇರಿದಂತೆ ಒಟ್ಟು 7 ಗ್ರಾ.ಪಂ. ಗಳಿಗೆ ಫೆ.18ಕ್ಕೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ಆಯಾ ಜಿಲ್ಲಾಧಿಕಾರಿಗಳು ಫೆ.5ಕ್ಕೆ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ. ಫೆ.8ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯದಿನ. ಫೆ.9ಕ್ಕೆ ನಾಮಪತ್ರ ಪರಿಶೀಲನೆ, ಫೆ.12ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಫೆ.18ರ ರವಿವಾರ ಚುನಾವಣೆ ನಡೆಯಲಿದೆ.

ಫೆ.20ಕ್ಕೆ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದನ್ವಯ ಫೆ.5ರಿಂದ ಫೆ.20ರ ವರೆಗೆ ಚುನಾವಣಾ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಗ್ರಾ.ಪಂ.ಗಳು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು, ಹಾಸನ ಜಿಲ್ಲೆಯ ವಣಗೂರು-ಉಚ್ಚಂಗಿ, ದಾವಣಗೆರೆಯ ಹಾರಕನಾಳು, ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿಯ ಹಾರೋಹಳ್ಳಿ, ಕೋರಮಂಗಲ ಹಾಗೂ ವಿಜಯಪುರ ಜಿಲ್ಲೆಯ ಇಂಗಳಗೇರಿ ಗ್ರಾ.ಪಂ.ಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News