ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2018-01-25 18:15 GMT

ಬೆಂಗಳೂರು, ಜ.25: ಶರವೇಗದಲ್ಲಿ ಸಾಗುತ್ತಿದ್ದ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಬಾಣಸವಾಡಿ ನಿವಾಸಿ ಶಿವರಾಮಕೃಷ್ಣನ್(30) ಮೃತ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ 8ರ ಸುಮಾರಿಗೆ ನಗರದ ಜ್ಞಾನಭಾರತಿ ಗೇಟ್ ಬಳಿಯ ಮೈಸೂರು ರಸ್ತೆಯಲ್ಲಿ ಈ ಅಪಘಾತ ನಡೆದಿದ್ದು, ಬೈಕಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಚಲಾಯಿಸುತ್ತಿದ್ದ ಶಿವರಾಮಕೃಷ್ಣನ್ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೂಲತಃ ತಮಿಳುನಾಡಿನವರಾದ ಶಿವರಾಮಕೃಷ್ಣನ್ ಅವರು ವೃತ್ತಿಯಲ್ಲಿ ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದರು. ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News