×
Ad

ಸಂವಿಧಾನ ತತ್ವ ಅನುಷ್ಠಾನದಿಂದ ಗಣರಾಜ್ಯ: ಎಸಿ ಭೂಬಾಲನ್

Update: 2018-01-26 23:31 IST

ಕುಂದಾಪುರ, ಜ.26: ದೇಶದ ಸಂವಿಧಾನದ ನಾಲ್ಕು ಪ್ರಮುಖ ತತ್ವಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವ ಪೂರ್ಣವಾಗಿ ಅನುಷ್ಠಾನ ಗೊಂಡಾಗ ಮಾತ್ರ ಪೂರ್ಣ ಗಣರಾಜ್ಯವನ್ನು ಕಾಣಲು ಸಾಧ್ಯ ಎಂದು ಕುಂದಾ ಪುರ ಉಪವಿಬಾಗದ ಸಹಾಯಕ ಆಯುಕ್ತ ಟಿ. ಭೂಬಾಲನ್ ಹೇಳಿದ್ದಾರೆ.

ಕುಂದಾಪುರದ ಗಾಂಧಿ ಮೈದಾನದಲ್ಲಿ ಶುಕ್ರವಾರ ಗಣರಾಜ್ಯೋತ್ಸವ ದಿನಾ ಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ಅಧ್ಯಕ್ಷತೆಯನ್ನು ಕುಂದಾಪುರ ತಾಪಂ ಅಧ್ಯಕ್ಷೆ ಜಯಶ್ರೀ ಮೊಗವೀರ ವಹಿಸಿ ದ್ದರು. ಕುಂದಾಪುರ ಪುರಸಭಾಧ್ಯಕ್ಷೆ ವಸಂತಿ ಮೋಹನ ಸಾರಂಗ, ಉಪಾಧ್ಯಕ್ಷ ರಾಜೇಶ್ ಕಾವೇರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಕಾಸ್ ಹೆಗ್ಡೆ ಮಾತನಾಡಿದರು.

ಈ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಅಸ್ಸಾಂ ರಾಜ್ಯದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಪಾಲ್ಗೊಂಡು ಪ್ರಶಸ್ತಿ ಪಡೆದ ಎಚ್‌ಎಂಎಂ ಪ್ರೌಢಶಾಲೆ, ವಿ.ಕೆ.ಆರ್ ಶಾಲೆಯ ತಂಡವನ್ನು ಗೌರವಿಸಲಾ ಯಿತು. ಪುರಸಭೆ ಮುಖ್ಯಾಧಿಕಾರಿ ಕೆ.ಗೋಪಾಲಕೃಷ್ಣ ಶೆಟ್ಟಿ, ಡಿವೈಎಸ್‌ಪಿ ಪ್ರವೀಣ್ ಎಚ್.ನಾಯಕ್, ತಹಶೀಲ್ದಾರ್ ಜಿ.ಎಂ.ಬೋರ್ಕರ್, ಕ್ಷೇತ್ರ ಶಿಕ್ಷಣಾ ಧಿಕಾರಿ ಅಶೋಕ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

ಕುಂದಾಪುರ ಠಾಣಾಧಿಕಾರಿ ಹರೀಶ್ ಆರ್. ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ 400 ವಿದ್ಯಾರ್ಥಿಗಳು ಪ್ರದರ್ಶಿಸಿದ ಬೃಹತ್ ಲೋಟಸ್ ಗಮನ ಸೆಳೆಯಿತು. ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕತಿಕ ಕಾರ್ಯಕ್ರಮಗಳು ಜರಗಿದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News