​ಕಳವು ಪ್ರಕರಣ: ಐವರ ಬಂಧನ

Update: 2018-01-27 17:42 GMT

ಬೆಂಗಳೂರು, ಜ.27: ಒಂಟಿಯಾಗಿರುವವರನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಆರೋಪ ಪ್ರಕರಣ ಸಂಬಂಧ ಐದು ಜನರನ್ನು ಬಂಧಿಸಿರುವ ಇಲ್ಲಿನ ಬ್ಯಾಟರಾಯನಪುರ ಠಾಣೆ ಪೊಲೀಸರು 5 ಲಕ್ಷ ರೂ. ಮೌಲ್ಯದ ಮಾಲು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಜೆಜೆ ನಗರ ಪಾದರಾಯನಪುರದ ನಿವಾಸಿಗಳಾದ ಶೋಹೆಬ್ ಪಾಷಾ(19), ಜುಬೇರ್ ಪಾಷಾ(19) ಸೇರಿ ಮೂವರು ಎಂದು ಪೊಲೀಸರು ಗುರುತಿಸಿದ್ದಾರೆ.
ಇತ್ತೀಚೆಗೆ ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾತ್ರಿ ವೇಳೆ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹಣ, ಮೊಬೈಲ್, ಚಿನ್ನಾಭರಣ ದರೋಡೆ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಪತ್ತೆಗೆ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದಾಗ ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಬರುವ ಮೈಸೂರು ರಸ್ತೆ, ನಾಯಂಡಹಳ್ಳಿ ಜಂಕ್ಷನ್‌ನಿಂದ ಮತ್ತಾಚಾರಿ ಇಂಡಸ್ಟ್ರಿಯಲ್ ಎಸ್ಟೇಟ್‌ಗಳಿಗೆ ಹೋಗುವ ರಸ್ತೆಯಲ್ಲಿ ದರೋಡೆ ಮಾಡಲು ಗುಂಪೊಂದು ಹೊಂಚು ಹಾಕುತ್ತಿದ್ದ ಬಗ್ಗೆ ಮಾಹಿತಿ ಲಭಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಮಾಹಿತಿ ಆಧಾರದ ಮೇಲೆ ಬ್ಯಾಟರಾಯನಪುರ ಪೊಲೀಸರು, ಆರೋಪಿಗಳ ಮೇಲೆ ದಾಳಿ ಮಾಡಿ ಐದು ಜನರನ್ನು ಬಂಧಿಸಿ ಮಾರಕಾಸ್ತ್ರಗಳು, ಬೈಕ್ ವಶಪಡಿಸಿಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದಾಗ 18 ಸುಲಿಗೆ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಅನುಚೇತ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News