ಮಡಿಕೇರಿ : ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಗಣರಾಜ್ಯ ದಿನ
Update: 2018-01-27 23:21 IST
ಮಡಿಕೇರಿ,ಜ.27:ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇಲ್ಲಿ 69ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ. ಬಿ.ಜೆ.ಮಹೇಂದ್ರರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಧ್ವಜಾರೋಹಣ ನೆರೆವೇರಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಅವರು ಗಣರಾಜ್ಯೋತ್ಸವದ ಸಂದೇಶ ನೀಡಿದರು.
ಸಮಾರಂಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಕಾರ್ಯಪ್ಪ ಕೆ.ಬಿ, ವೈದ್ಯಕೀಯ ಅಧೀಕ್ಷಕರಾದ ಡಾ.ಅಬ್ದುಲ್ ಅಝೀಝ್, ಮುಖ್ಯ ಆಡಳಿತಾಧಿಕಾರಿಗಳಾದ ಶ್ರೀಮತಿ ಮೇರಿ ನಾಣಯ್ಯ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ಎಂಬಿಬಿಎಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.