×
Ad

ಪುತ್ತೂರು: ಝೈಬುನ್ನೀಸ ಸಂಶಯಾಸ್ಪದ ಮೃತ್ಯು- ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

Update: 2018-01-27 23:44 IST

ಪುತ್ತೂರು, ಜ. 27: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ತಾಲೂಕು ಸಮಿತಿಯ ವತಿಯಿಂದ ಮೈಸೂರಿನ ಕೆ ಆರ್ ಪೇಟೆಯ ಅಲ್ಪಸಂಖ್ಯಾತ ವಸತಿ ಶಾಲೆಯಲ್ಲಿ ನಿಗೂಢ ಸಾವನ್ನಪ್ಪಿದ ವಿದ್ಯಾರ್ಥಿನಿ ಝೈಬುನ್ನೀಸಾಳ ಸಾವಿನ ಸಮಗ್ರ ತನಿಖೆ ಹಾಗು ಹೆಚ್ಚಿನ ಪರಿಹಾರ ಮೊತ್ತ ನೀಡುವಂತೆ ಆಗ್ರಹಿಸಿ ಪುತ್ತೂರಿನ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಸವಾದ್ ಕಲ್ಲರ್ಪೆ ರಾಜ್ಯದಲ್ಲಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಮಿತಿಮೀರುತ್ತಿದ್ದು, ಸರಕಾರ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಚುನಾವಣೆಯ ಮೂಲಕ ವಿದ್ಯಾರ್ಥಿ ಸಮಾಜ ತಕ್ಕ‌ ಉತ್ತರ ನೀಡಲಿದೆ ಎಂದರು.

ರಿಯಾಝ್ ಬಳಕ್ಕ ದಿಕ್ಸೂಚಿ ಭಾಷಣ ಮಾಡಿದರು. ಹರ್ಷಿತ್ ಕುಮಾರ್ ಕುರಿಯ ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲ್ಲೂಕು ಸಮಿತಿ ಕಾರ್ಯದರ್ಶಿ ರಿಯಾಝ್ ಅಂಕತಡ್ಕ ಉಪಸ್ಥಿತರಿದ್ದರು. ಅಝೀಝ್ ಕಲ್ಲರ್ಪೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News