×
Ad

ಮಹಿಳೆಯ ಸರ ಅಪಹರಣಕ್ಕೆ ಯತ್ನ: ಇಬ್ಬರು ಸೆರೆ

Update: 2018-01-27 23:48 IST

ಮಂಗಳೂರು, ಜ. 27: ಮಹಿಳೆಯೊಬ್ಬರ ಕತ್ತಿನಿಂದ ಸರ ಅಪಹರಿಸಿ ಪರಾರಿಯಾಗುತ್ತಿದ್ದ ಇಬ್ಬರನ್ನು ಸಾರ್ವಜನಿಕರೇ ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಮದ್ಯದಲ್ಲಿ ನಡೆದಿದೆ.

ಮಹಿಳೆಯೊಬ್ಬರು ಶನಿವಾರ ಬೆಳಗ್ಗೆ 9:30ಕ್ಕೆ ಮನೆಯಿಂದ ಮದ್ಯ ಜಂಕ್ಷನ್‌ಗೆ ನಡೆದುಕೊಂಡು ಹೋಗುತ್ತಿದ್ದಾಗ ಸ್ಕೂಟರ್‌ನಲ್ಲಿ ಬಂದ ಇಬ್ಬರು ದಾರಿ ಕೇಳುವ ನೆಪದಲ್ಲಿ ಮಾತನಾಡಿ, ಕತ್ತಿನಲ್ಲಿದ್ದ ಚಿನ್ನದ ಸರ ಎಳೆದುಕೊಂಡು ಪರಾರಿಯಾಗಿದ್ದಾರೆ.

ಈ ಸಂದರ್ಭ ಮಹಿಳೆ ಬೊಬ್ಬೆ ಹಾಕಿದ್ದರಿಂದ ಸ್ಥಳೀಯರು ಜಮಾಯಿಸಿ ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಬಳಿಕ ಇಬ್ಬರನ್ನೂ ಹಿಡಿದು ಪೊಲೀಸರಿಗೊಪ್ಪಿಸಿ ದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News