ಆಫ್ರಿಕ ವಿರುದ್ಧದ ಟ್ವೆಂಟಿ-20 ಸರಣಿಗೆ ಟೀಮ್ ಇಂಡಿಯಾ ಪ್ರಕಟ; ರೈನಾಗೆ ಸ್ಥಾನ

Update: 2018-01-28 07:59 GMT

 ಮುಂಬೈ, ಜ.28: ದಕ್ಷಿಣ ಆಫ್ರಿಕ ವಿರುದ್ಧದ ಮೂರು ಟ್ವೆಂಟಿ-20 ಪಂದ್ಯಗಳ ಸರಣಿಗೆ ಟೀಮ್ ಇಂಡಿಯಾವನ್ನು ಬಿಸಿಸಿಐ ರವಿವಾರ ಪ್ರಕಟಿಸಿದ್ದು, ಆಲ್‌ರೌಂಡರ್ ಸುರೇಶ್ ರೈನಾ ಅವರು ವರ್ಷದ ಬಳಿಕ ತಂಡಕ್ಕೆ ವಾಪಸಾಗಿದ್ದಾರೆ.

31ರ ಹರೆಯದ ರೈನಾ ಅವರು ಕಳೆದ ವರ್ಷದ ಫೆಬ್ರವರಿಯಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಬಾರಿ ಟ್ವೆಂಟಿ-20 ಪಂದ್ಯವನ್ನು ಆಡಿದ್ದರು.

 ಆರಂಭಿಕ ದಾಂಡಿಗ ಶಿಖರ್ ಧವನ್ ತಂಡಕ್ಕೆ ಮರಳಿದ್ದಾರೆ. ಲಂಕಾ ವಿರುದ್ಧ ತವರಿನಲ್ಲಿ ನಡೆದ ಟ್ವೆಂಟಿ-20 ಸರಣಿಯಲ್ಲಿ ಧವನ್‌ಗೆ ವಿಶ್ರಾಂತಿ ನೀಡಲಾಗಿತ್ತು.

ಆಫ್ರಿಕ ವಿರುದ್ಧದ ಟ್ವೆಂಟ-20 ಸರಣಿಗೆ ಭಾರತ ತಂಡ

 ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪನಾಯಕ), ಶಿಖರ್ ಧವನ್, ಲೋಕೇಶ್ ರಾಹುಲ್, ಸುರೇಶ್ ರೈನಾ, ಎಂ.ಎಸ್.ಧೋನಿ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಮನೀಷ್ ಪಾಂಡೆ, ಅಕ್ಷರ್ ಪಟೇಲ್, ಯುಜುವೇಂದ್ರ ಚಹಾಲ್, ಕುಲ್‌ದೀಪ್ ಯಾದವ್, ಭುವನೇಶ್ವರ ಕುಮಾರ್, ಜಸ್‌ಪ್ರೀತ್ ಬುಮ್ರಾ, ಜೈದೇವ್ ಉನಾದ್ಕಟ್, ಶಾರ್ದೂಲ್ ಠಾಕೂರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News