×
Ad

ಪಡುಬಿದ್ರೆಯಲ್ಲಿ ನಾರಿ ಬಂಟ ಮಹಿಳಾ ಸಮಾವೇಶ

Update: 2018-01-28 20:32 IST

ಪಡುಬಿದ್ರೆ, ಜ. 28: ಬಂಟ ಸಮಾಜದ ಅವಶ್ಯವಿರುವವರಿಗೆ ಶಿಕ್ಷಣ, ವೈದ್ಯಕೀಯ, ಮದುವೆಗೆ ಸಹಾಯ ನೀಡುವ ಕೆಲಸ ಆಗಬೇಕಾಗಿದೆ. ಸಮಾಜದಲ್ಲಿ ಬಡವ ಶ್ರೀಮಂತರೆಂಬ ಅಂತರ ಬಿಟ್ಟು, ಸಮಾಜದ ಆರ್ಥಿಕವಾಗಿ ಹಿಂದುಳಿದವರಿಗೆ ಇನ್ನಷ್ಟು ಉತ್ತೇಜನ ನೀಡಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸ ಬೇಕಾಗಿದೆ ಎಂದು ಮುಂಬೈ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ರಂಜಿತಾ ಎಸ್ ಹೆಗ್ಡೆ ಹೇಳಿದರು.

ಪಡುಬಿದ್ರೆ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗ ಇಲ್ಲಿನ ಬಂಟರ ಭವನದಲ್ಲಿ ರವಿವಾರ ಆಯೋಜಿಸಿದ್ದ ನಾರಿ-ರೂವಾರಿ ಬಂಟ ಮಹಿಳಾ ಸಮಾವೇಶ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಂಗಳೂರು ಶ್ರೀದೇವಿ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಮೈನಾ ಎಸ್ ಶೆಟ್ಟಿ ಮಾತನಾಡಿ, ಬಂಟ ಸಮಾಜದಲ್ಲಿ ಮಹಿಳೆಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಬಂಟ ಸಮಾಜದಲ್ಲಿ ವಿಚ್ಛೇದನ ಪ್ರಕರಣಗಳೂ ಹೆಚ್ಚಾಗುತ್ತಿವೆ. ಸಮಾಜ ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಾಗಿದೆ. ಪುರುಷರಿಗಿಂತ ಮೇಲು ಎಂಬ ಅಹಂ ಇಲ್ಲದೆ ಸಂಸಾರ ಸುಲಲಿತವಾಗಿ ನಡೆಯುವಲ್ಲಿ ಮಹಿಳೆ ಪ್ರಮುಖ ಪಾತ್ರವಹಿಸಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ಕೊನೆ ಗಾಣಿಸಲು ಕಟ್ಟುನಿಟ್ಟಿನ ಕಾನೂನು ಜಾರಿಯಾಗಬೇಕು. ಆಧುನಿಕ ತಂತ್ರಜ್ಞಾನದ ಪರಿಣಾಮ ಬಂಟ ಸಮಾಜದ ಸಂಸ್ಕೃತಿ ಮರೆಯಾಗುತ್ತಿದೆ. ಬಂಟ ಸಂಸ್ಕೃತಿಯ ಬಗ್ಗೆ ಸಮಾಜದ ಮಹಿಳೆಯರು ಯುವಪೀಳಿಗೆಗೆ ಸರಿಯಾದ ಮಾರ್ಗದರ್ಶನ ನೀಡದಿದ್ದಲ್ಲಿ ಬಂಟ ಸಮಾಜದ ಹೆಸರೇ ನಶಿಸಿ ಹೋಗಬಹುದು ಎಂದು ವಿಷಾಧ ವ್ಯಕ್ತಪಡಿಸಿದರು.

ಕಾರ್ಯಕ್ರಮಕ್ಕೆ ಸಹಕರಿಸಿದ ಉಪೇಂದ್ರ ಶೆಟ್ಟಿ, ನಾರಾಯಣ ಶೆಟ್ಟಿ ಎರ್ಮಾಳು, ಸುಧಾಕರ ಹೆಗ್ಡೆ, ಶ್ಯಾಮ್ ಶೆಟ್ಟಿ, ವಿ.ಪಿ. ಶೆಟ್ಟಿ ಅವರನ್ನು ಸನ್ಮಾನಿಸಲಾ ಯಿತು. ವಿವಿಧೆಡೆಯ 12 ಸಂಘಗಳು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು. ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷ ಮನೋಹರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂ. ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಮುಂಬೆ ಬಂಟ್ಸ್ ಅಸೋಸಿಯೇಶನ್‌ನ ಮಹಿಳಾ ವಿಭಾಗದ ಅಧ್ಯಕ್ಷೆ ಶಾರದಾ ಎಸ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಡಿ.ಚಂದ್ರಹಾಸ ರೈ, ಉಡುಪಿ ತಾಲೂಕು ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಮನೋಹರ ಶೆಟ್ಟಿ, ಪಡುಬಿದ್ರೆ ಬಂಟರ ಸಂಘದ ಮಾಜಿ ಅಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿ, ಸುರೇಶ್ ಶೆಟ್ಟಿ, ಕಾರ್ಯದರ್ಶಿ ಡಾ. ಮನೋಜ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಶರತ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಅಕ್ಷತಾ ಎಸ್ ಶೆಟ್ಟಿ, ಮಾಜಿ ಅಧ್ಯಕ್ಷೆ ಶೋಭಾ ಜೆ ಶೆಟ್ಟಿ, ಕಾರ್ಯದರ್ಶಿ ಸುಮಂಗಲಾ ಎಸ್ ಶೆಟ್ಟಿ, ಕೋಶಾಧಿಕಾರಿ ರಶ್ಮಿ ಎಚ್ ಶೆಟ್ಟಿ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News