ಉಡುಪಿ: ಟೈಲರ್ಸ್ ಸಂಘಟನೆಯಿಂದ ರಕ್ತದಾನ, ನೇತ್ರದಾನ ಶಿಬಿರ
ಉಡುಪಿ, ಜ.28: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಡುಪಿ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಜಿಲ್ಲಾಸ್ಪತ್ರೆ, ಮಿಶನ್ ಆಸ್ಪತ್ರೆ, ಬೆಳಕು ಸರಕಾರಿ ಶುಶ್ರೂಷಕರ ಸಂಘ, ಲಯನ್ಸ್ ಕ್ಲಬ್, ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಸಹಯೋಗದೊಂದಿಗೆ ರಕ್ತದಾನ, ನೇತ್ರದಾನ ಮತ್ತು ಉಚಿತ ವೈದ್ಯಕೀಯ ಶಿಬಿರವನ್ನು ರವಿವಾರ ಬ್ರಹ್ಮಗಿರಿ ಲುನ್ಸ್ ಭವನದಲ್ಲಿ ಆಯೋಜಿಸಲಾಗಿತ್ತು.
ಶಿಬಿರವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಘದ ಉಡುಪಿ ಕ್ಷೇತ್ರ ಅಧ್ಯಕ್ಷ ಗುರುರಾಜ್ ಎಂ.ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ದೇಹದಾನ ಮಾಡಿದ ಕುತ್ಪಾಡಿ ವಿಠಲ ಗಾಣಿಗ ದಂಪತಿಯನ್ನು ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಬಡಗಬೆಟ್ಟು ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಸಂಘದ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ವಸಂತ್, ಜಿಲ್ಲಾಧ್ಯಕ್ಷ ಕೆ.ರಾಮ ಚಂದ್ರ, ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಟಿ.ಸಾಲ್ಯಾನ್, ಶುಶ್ರೂಷಕರ ಸಂಘದ ಸಜಿನಿ, ಲಯನ್ಸ್ ಕ್ಲಬ್ ಅಧ್ಯಕ್ಷ ರಂಜನ್, ಇಂದು ರಮಾನಂದ ಭಟ್, ಮಿಷನ್ ಆಸ್ಪತ್ರೆಯ ಡಾ.ಗಣೇಶ್ ಕಾಮತ್ ಉಪಸ್ಥಿತರಿದ್ದರು.
ರಾಜ್ಯ ಸಮಿತಿ ಕೋಶಾಧಿಕಾರಿ ಅಬ್ದುಲ್ ಖಾದರ್ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ದಯಾನಂದ ಕೋಟ್ಯಾನ್ ಸ್ವಾಗತಿಸಿ ದರು. ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.