ಜನರ ಪ್ರೀತಿ, ವಿಶ್ವಾಸ ಇದ್ದರೆ ರಾಜಕೀಯದಲ್ಲಿ ಯಶಸ್ವಿ ಸಾಧ್ಯ: ಸಚಿವ ಪ್ರಮೋದ್
ಉಡುಪಿ, ಜ.28: ರಾಜಕೀಯದಲ್ಲಿ ಯಶಸ್ವಿ ಸಾಧಿಸಬೇಕಾದರೆ ಜನರ ಬೆಂಬಲ, ವಿಶ್ವಾಸ, ಪ್ರೀತಿ, ಆಶೀರ್ವಾದ ಅತ್ಯಂತ ಮುಖ್ಯ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ರವಿವಾರ ರಾಜ್ಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ ಹಾಗೂ ಕೆಪಿಸಿಸಿ ಕಾರ್ಯ ದರ್ಶಿ ಡಾ.ರಾಜಶೇಖರ್ ಕೋಟ್ಯಾನ್ ಅವರಿಗೆ ಅಭಿನಂದನೆಯನ್ನು ನೆರವೇರಿಸಿ ಅವರು ಮಾತನಾಡುತಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಪು ಶಾಸಕ ವಿನಯ ಕುಮಾರ್ ಸೊರಕೆ ಮಾತನಾಡಿ, ಕಾಂಗ್ರೆಸ್ ಸರಕಾರ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರೂ ವಿರೋಧ ಪಕ್ಷಗಳು ಜನರನ್ನು ದಾರಿ ತಪ್ಪಿಸುವ ಪ್ರಯತ್ನವನ್ನು ಮಾಡುತ್ತಿದೆ. ಕೆಲವು ಪಕ್ಷಗಳು ಯುವಕರನ್ನು ದಾರಿ ತಪ್ಪಿಸಿ ಅವರ ಭವಿಷ್ಯ ಹಾಳು ಮಾಡುತ್ತಿವೆ. ಅವರಿಗೆ ಸನ್ಮಾರ್ಗದ ದಾರಿ ತೋರಿಸುವ ಕಾರ್ಯವನ್ನು ನಾವು ಮಾಡಬೇಕು ಎಂದರು.
ಅಧ್ಯಕ್ಷತೆಯನ್ನು ಮುಂಬೈಯ ಉದ್ಯಮಿ ಹರೀಶ್ ಜಿ.ಅಮೀನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ಮೋಟಮ್ಮ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪಧ್ಮನಾಭ ಪಯ್ಯಡೆ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ ಅಭಿನಂದನಾ ಭಾಷಣ ಮಾಡಿದರು.
ವೇದಿಕೆಯಲ್ಲಿ ಸುರೇಂದ್ರ ಪೂಜಾರಿ, ಗಣೇಶ್ ಪೂಜಾರಿ, ವಸಂತ ಶೆಟ್ಟಿ ಬೆಳ್ಳಾರೆ, ಎಂ.ಎ.ಗಫೂರ್, ವರೋನಿಕಾ ಕರ್ನೆಲಿಯೋ, ಅಶೋಕ್ ಸುವರ್ಣ, ಮೀನಾಕ್ಷಿ ಮಾಧವ ಬನ್ನಂಜೆ, ಸಂಧ್ಯಾ, ಸುಧಾಕರ ಶೆಟ್ಟಿ ಮೈರ್ಮಾಡಿ, ಬಿ.ನರ ಸಿಂಹಮೂರ್ತಿ, ಸರಳಾ ಕಾಂಚನ್, ಉದಯ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್, ಭುಜಂಗ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಸತೀಶ್ ಅಮೀನ್ ಪಡುಕೆರೆ, ನವೀನ್‌ಚಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.