ಕೊಳ್ಳೇಗಾಲ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Update: 2018-01-28 17:11 GMT

ಕೊಳ್ಳೇಗಾಲ,ಜ.28: ಮಕ್ಕಳ ಸಾಧನೆಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿದಾಗ ಇನ್ನೂ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದು ನಾಯಕ ಸಮುದಾಯದ ಮುಖಂಡ ಪಾಳ್ಯ ಜಯಸುಂದರ ಅವರು ತಿಳಿಸಿದರು.

ಪಟ್ಟಣದ ಕಾವೇರಿ ರಸ್ತೆಯಲ್ಲಿರುವ ರಾಮಮಂದಿರದಲ್ಲಿ ಭಾನುವಾರ ತಾಲೂಕು ನಾಯಕರ ಸರ್ಕಾರಿ ನೌಕರರ ಸೇವಾ ಸಮಿತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಮುಂದಿನ ಪೀಳಿಗೆಯನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸಿದಾಗ ಮಾತ್ರ ಸಮುದಾಯದ ಆಸ್ತಿಯಾಗುತ್ತಾರೆ ಎಂದು ಅವರು ತಿಳಿಸಿದರು.

ಸಂಘದ ಗೌರವಾಧ್ಯಕ್ಷ ಸಿದ್ದಪ್ಪಾಜಿ ಮಾತನಾಡಿ, ಕಳೆದ 6 ವರ್ಷಗಳಿಂದ ಅನೇಕ ಸೇವಾ ಕಾರ್ಯಗಳನ್ನು ಮಾಡುತ್ತಿದ್ದು, ಅದರಲ್ಲಿ ಒಂದಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಸಮಾಜದ ಮಕ್ಕಳ ಅಭಿವೃದ್ಧಿ ಕಡೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ 30 ಮಕ್ಕಳು ಹಾಗೂ  ಪಿಯುಸಿ 44 ಉತ್ತಮವಾಗಿ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಶಸ್ತಿ ನೀಡುವ ಮೂಲಕ ಪುರಸ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಉಮೇಶ್, ಕಾರ್ಯದರ್ಶಿ ನಟರಾಜು, ಉಪಾಧ್ಯಕ್ಷೆ ಪಾರ್ವತಮ್ಮ, ಪದಾಧಿಕಾರಿಗಳಾದ ಮತ್ತುರಾಜ್, ವಿಜಯ್‍ಕುಮಾರ್, ಹೂವಮ್ಮ, ಮಹದೇವಸ್ವಾಮಿ, ಬಸವರಾಜು ಹಾಗೂ ಇನ್ನಿತರರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News