×
Ad

ಮೊದಲ ಹಂತದ ಪಲ್ಸ್ ಪೋಲಿಯೋ: ಕೊಡಗಿನಲ್ಲಿ ಶೇ.98 ರಷ್ಟು ಸಾಧನೆ

Update: 2018-01-28 23:23 IST

ಮಡಿಕೇರಿ, ಜ.28 : ಕೊಡಗು ಜಿಲ್ಲೆಯಲ್ಲಿ ನಡೆದ ಮೊದಲ ಹಂತದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶೇ.98ರಷ್ಟು ಸಾಧನೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು 40,627 ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಈ ಪೈಕಿ 39,853 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ.98.09ರಷ್ಟು ಸಾಧನೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ 35,971 ಪೈಕಿ 35,759 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ.99.4ರಷ್ಟು ಸಾಧನೆ ಮಾಡಲಾಗಿದ್ದರೆ. ಪಟ್ಟಣ ಪ್ರದೇಶದ 4656 ಮಕ್ಕಳ ಪೈಕಿ 4,094 ಮಕ್ಕಳಿಗೆ ಲಸಿಕೆ ನೀಡುವುದರೊಂದಿಗೆ ಶೇ.87.9ರಷ್ಟು ಸಾಧನೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಲೂಕುವಾರು ಪ್ರಗತಿಯನ್ವಯ ಮಡಿಕೇರಿ ತಾಲೂಕಿನ 11,320 ಮಕ್ಕಳ ಪೈಕಿ 10,483 ಮಕ್ಕಳಿಗೆ ಲಸಿಕೆ ನೀಡುವ ಮೂಲಕ ಶೇ.92.8, ಸೋಮವಾರಪೇಟೆ ತಾಲೂಕಿನಲ್ಲಿ 13,657 ಮಕ್ಕಳ ಗುರಿಯ ಬದಲಾಗಿ 14,017 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಗುರಿ ಮೀರಿದ ಸಾಧನೆ ಮಾಡಲಾಗಿದ್ದು, ವೀರಾಜಪೇಟೆ ತಾಲೂಕಿನಲ್ಲಿ 15650 ಮಕ್ಕಳ ಪೈಕಿ 15353 ಮಕ್ಕಳಿಗೆ ಲಸಿಕೆ ನೀಡಿ ಶೇ.98ರಷ್ಟು ಸಾಧನ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಜಿಲ್ಲೆಯ 20 ಕಡೆಗಳಲ್ಲಿ ತೆರೆಯಲಾಗಿದ್ದ ಟ್ರಾನ್ಸಿಸ್ಟ್ ಲಸಿಕಾ ಕೇಂದ್ರಗಳಲ್ಲಿ ಸುಮಾರು 1500ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಮೊದಲ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಭಾನುವಾರ ನಗರದ ಹಿಲ್ ಕನಕದಾಸ ರಸ್ತೆ, ಹಿಂದೂಸ್ಥಾನ್ ಶಾಲೆಯ ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ಶಿಶುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.   

ಐದು ವರ್ಷದವರೆಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸುವಂತೆ ಶಾಸಕರಾದ ಕೆ.ಜಿಬೋಪಯ್ಯ ಅವರು ಕರೆ ನೀಡಿದರು.  

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸುರೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ನೀಲೇಶ್, ಡಾ.ಶಿವಕುಮಾರ್, ಡಾ.ಆನಂದ್ ಇತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News