ರೈತ ಮಹಿಳೆಯರಿಗೆ ಹಣ್ಣು ಸಂಸ್ಕರಣಾ ತರಬೇತಿ ಕಾರ್ಯಕ್ರಮ
ಬಂಟ್ವಾಳ, ಜ. 29: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ಸಂಯುಕ್ತಾಶ್ರಯದಲ್ಲಿ 2017-18ಸಾಲಿನ ರೈತ ಮಹಿಳೆಯರಿಗೆ ಹಣ್ಣು ಸಂಸ್ಕರಣಾ ತರಬೇತಿ ಕಾರ್ಯಕ್ರಮ ನರಿಕೊಂಬು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಸೋಮವಾರ ನಡೆಯಿತು.
ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ವಾವಲಂಬಿ ಜೀವನಕ್ಕೆ ಇಂತಹ ತರಬೇತಿಗಳು ಸಹಕಾರಿಯಾಗಿದೆ. ಇಚ್ಛಾಶಕ್ತಿಯಿಂದ ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಿ ಆರೋಗ್ಯವನ್ನು ವೃದ್ಧಸಿಕೊಳ್ಳಿ. ಆರ್ಥಿಕ ಸ್ವಾವಲಂಬನೆಗೆ ಸರಕಾರ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ನರಿಕೊಂಬು ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಾಲಿನಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಾನಂದ ಪೂಜಾರಿ, ಸಂಪನ್ಮೂಲ ವ್ಯಕ್ತಿ ಸುಮನಾ ಉಪಸ್ಥಿತರಿದ್ದರು. ಬಳಿಕ ರೈತರಿಗೆ ತರಕಾರಿ ಬೀಜಗಳನ್ನು ವಿತರಿಸಲಾಯಿತು. ಸಹಾಯಕ ತೋಟಗಾರಿಕೆಯ ನಿರ್ದೇಶಕ ದಿನೇಶ್ ಸ್ವಾಗತಿಸಿ, ವಂದಿಸಿದರು.