ಎ.ಡಿ.ಮುಲ್ಲಾ

Update: 2018-01-29 12:42 GMT

ಭಟ್ಕಳ,ಜ.29: ಇಲ್ಲಿನ ಅಂಜುಮನ್ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಅಬ್ದುಲ್ ಘನಿ ಡಿ.ಮುಲ್ಲಾ(70) ಸೋಮವಾರ ಬೆಳಗಾವಿಯ ತಮ್ಮ ಸ್ವಗೃಹದಲ್ಲಿ ನಿಧನರಾದರು. 

ಇವರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಶಿಷ್ಯವರ್ಗವನ್ನು ಅಗಲಿದ್ದಾರೆ.

1971ರಿಂದ 2006 ವರೆಗೆ ಸುಮಾರು 35 ವರ್ಷಗಳ ಅಂಜುಮನ್ ಮಹಾವಿದ್ಯಾಲಯದಲ್ಲಿ ಭೌತವಿಜ್ಞಾನದ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 

ಅಂಜುಮನ್ ಸಂಸ್ಥೆಯ ಹಲವು ಪದಾಧಿಕಾರಿ ಇವರ ಶಿಷ್ಯವರ್ಗದಲ್ಲಿ ಸೇರಿದ್ದು ದೇಶವಿದೇಶಗಳಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ.
ಇವರ ನಿಧನಕ್ಕೆ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೊ, ಮಾಜಿ ಅಧ್ಯಕ್ಷ ಡಾ.ಎಸ್.ಎಂ.ಸೈಯ್ಯದ್ ಖಲೀಲುರ್ರಹ್ಮಾನ್, ತಂಝೀಮ್ ಅಧ್ಯಕ್ಷ ಮುಝಮ್ಮಿಲ್ ಕಾಝಿಯಾ, ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಮುಜಾಹಿದ್ ಮುಸ್ತಫಾ ಸೇರಿದಂತೆ ಸಂಸ್ಥೆಯ ಸಿಬ್ಬಂದಿವರ್ಗ ಹಾಗೂ ಅಪಾರ ಶಿಷ್ಯವರ್ಗ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ