​ಅರ್ಜಿ ಆಹ್ವಾನ

Update: 2018-01-29 14:31 GMT

ಉಡುಪಿ, ಜ.29:ಜಿಲ್ಲೆಯಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ತೆರೆಯ ಬಯಸುವ ಆಡಳಿತ ಮಂಡಳಿ ಅಥವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ಫಾರಂನ್ನು ಇಲಾಖೆ ವೆಬ್‌ಸೈಟ್ -www.pue.kar.nic.in- ನಿಂದ ಪಡೆದು ಜ.31ರೊಳಗೆ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, 18ನೇ ಕ್ರಾಸ್ ಮಲ್ಲೇಶ್ವರಂ ಬೆಂಗಳೂರು-12 ಇಲ್ಲಿಗೆ ಸಲ್ಲಿಸಬೇಕು ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News