ಜೀಪು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು
Update: 2018-01-29 20:07 IST
ಕಾರ್ಕಳ, ಜ.29: ಜೀಪೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ 8.30ಕ್ಕೆ ಕೆದಿಂಜೆ ಗ್ರಾಮದ ಪೊಸರ್ಮೆ ಕ್ರಾಸ್‌ನಲ್ಲಿರುವ ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ಪಡುಬಿದ್ರೆ ಸಮೀಪದ ಎರ್ಮಾಳ್ ನಿವಾಸಿ ಗಣೇಶ್(38) ಎಂದು ಗುರು ತಿಸಲಾಗಿದೆ. ಇವರು ಜ್ಯುಪಿಟರ್ ದ್ವಿಚಕ್ರ ವಾಹನದಲ್ಲಿ ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಜೀಪು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಗಣೇಶ್ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಅಪಘಾತದಿಂದ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.