ಬಸ್- ಸ್ಕೂಟರ್ ಢಿಕ್ಕಿ: ಸವಾರ ಮೃತ್ಯು
Update: 2018-01-29 20:43 IST
ಮೈಸೂರು,ಜ.29: ಹೊಂಡಾ ಆಕ್ಟೀವಾ ಸ್ಕೂಟರ್‍ಗೆ ಬಸ್ ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮೈಸೂರಿನ ಇಟ್ಟಿಗೆ ಗೂಡಿನ ಗಾಂಧಿವನದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಆಶೀರ್ವಾದ್ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಭಾಸ್ಕರ್ (20)ಎಂದು ಗುರುತಿಸಲಾಗಿದೆ. ಕೇರಳಕ್ಕೆ ಸೇರಿದ ಸಾರಿಗೆ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್‍ಗೆ ಢಿಕ್ಕಿ ಹೊಡೆದಿದೆ.ಈ ವೇಳೆ ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಸಿದ್ಧಾರ್ಥ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.