×
Ad

ಕಲ್ಲಡ್ಕ ಭಟ್ ಫೋಟೋ ಬಳಸಿ ಅವಹೇಳನ: ಸಾಮಾಜಿಕ ಜಾಲತಾಣದಲ್ಲಿ ವೈರಲ್

Update: 2018-01-29 21:02 IST

ಮಂಗಳೂರು, ಜ.29: ಸಾಮಾಜಿಕ ಜಾಲತಾಣಗಳಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರ ಫೋಟೋ ಹಾಕಿ ಆಕ್ಷೇಪಾರ್ಹ ಬರಹವನ್ನು ಪೋಸ್ಟ್ ಮಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

'ಟ್ರೂ ಮೀಡಿಯಾ ನೆಟ್‌ವರ್ಕ್' ಹೆಸರಿನ ಫೇಸ್‌ಬುಕ್ ಪುಟದಲ್ಲಿ ಗಣವೇಷಧಾರಿ ಆರೆಸ್ಸೆಸ್ಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಫೋಟೋ ಬಳಸಿ ಅವಹೇಳನ ಮಾಡಿ ಸಂದೇಶ ಹಾಕಲಾಗಿದೆ. ರವಿವಾರ ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಫೋಟೊ ಇದೀಗ ವೈರಲ್ ಆಗಿದೆ.

ಅಧಿಕಾರ ಸ್ವೀಕರಿಸಿದ್ದಷ್ಟೆ. ಒಂದೆರಡು ದಿನದಲ್ಲಿ ಜಿಲ್ಲೆಯ ಬಗ್ಗೆ ಮಾಹಿತಿ ಕಲೆ ಹಾಕಿದ ನಂತರ ಮುಂದಿನ ಕಾರ್ಯಕ್ರಮದ ರೂಪುರೇಷೆ ಹಾಕಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ನೂತನ ಎಸ್ಪಿ ರವಿಕಾಂತೇ ಗೌಡ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News