ಪೊಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆಗೆ ಡಾ.ಜಿ.ಪರಮೇಶ್ವರ್ ಒತ್ತಾಯ

Update: 2018-01-29 17:08 GMT

ಬೆಂಗಳೂರು, ಜ. 29: ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೂ ಆರನೇ ವೇತನ ಆಯೋಗ ವರದಿಯಲ್ಲಿ ವೇತನ ಪರಿಷ್ಕರಣೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಒತ್ತಾಯ ಮಾಡಿದ್ದಾರೆ.

ಈ ಸಂಬಂಧ ವೇತನ ಆಯೋಗದ ಅಧ್ಯಕ್ಷ ಎಂ.ಆರ್.ಶ್ರೀನಿವಾಸಮೂರ್ತಿ ಅವರಿಗೆ ಪತ್ರ ಬರೆದಿರುವ ಪರಮೇಶ್ವರ್, ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ವೇತನ ಪರಿಷ್ಕರಣೆಯನ್ನು ಜಾರಿಗೊಳಿಸುವ ಸಲುವಾಗಿ ಆರನೇ ವೇತನ ಆಯೋಗ ರಚಿಸಿದ್ದು, ಆಯೋಗದ ಅಧ್ಯಕ್ಷರಾಗಿ ವರದಿ ಸಿದ್ಧಪಡಿಸುತ್ತಿರುವುದು ಸಂತಸದ ವಿಷಯ. ತಾನು ಗೃಹ ಸಚಿವನಾಗಿ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆ ಸಲುವಾಗಿ ರಾಘವೇಂದ್ರ ಔರಾದ್ಕರ್ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ರಚಿಸಲಾಗಿತ್ತು. ಸದರಿ ಸಮಿತಿ ದೇಶದ ವಿವಿಧ ರಾಜ್ಯಗಳು ಪೊಲೀಸ್ ಸಿಬ್ಬಂದಿಗೆ ನೀಡುತ್ತಿರುವ ವೇತನ, ಭತ್ಯೆಗಳ ಬಗ್ಗೆ ಅಧ್ಯಯನ ನಡೆಸಿ ಪೊಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆಗೆ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿನ ಅಂಶವನ್ನು 6ನೆ ವೇತನ ಆಯೋಗ ವೇತನ ಪರಿಷ್ಕರಣೆ ಸಂದರ್ಭದಲ್ಲಿ ಪರಿಗಣಿಸಬೇಕೆಂದು ಪರಮೇಶ್ವರ್ ಪತ್ರದಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News