×
Ad

ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು

Update: 2018-01-30 22:28 IST

ಬೆಂಗಳೂರು, ಜ.30: ಮಠಕ್ಕೆ ಸೇರಿದ ಸ್ಥಿರಾಸ್ತಿಗೆ ಸಂಬಂಧಿಸಿದಂತೆ ವಂಚನೆ ಎಸಗಲಾಗಿದೆ ಎಂಬ ಆರೋಪ ಪ್ರಕರಣದಲ್ಲಿ ಚಿತ್ರದುರ್ಗದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

ಈ ಕುರಿತಂತೆ ಯಾದವಾನಂದ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಸ್ಥಿರಾಸ್ತಿಗೆ ಸಂಬಂಧಿಸಿದ ಹಣ ವಂಚನೆ ಆರೋಪದಲ್ಲಿ ರಂಗಪ್ಪಎಂಬುವರು ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ದೂರಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News