ಜ.31 ರಂದು ಕಾಂಗ್ರೆಸ್ ಪ್ರಚಾರ ಸಮಿತಿ ಕಾರ್ಯಕಾರಿ ಸಮಿತಿ ಸಭೆ
Update: 2018-01-30 22:30 IST
ಬೆಂಗಳೂರು, ಜ.30: ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಮೊದಲ ಕಾರ್ಯಕಾರಿ ಸಮಿತಿಯ ಸಭೆಯು ಜ.31ರಂದು ಬೆಳಗ್ಗೆ 11 ಗಂಟೆಗೆ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆಯಲಿದೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷರಾದ ದಿನೇಶ್‌ಗುಂಡೂರಾವ್, ಎಸ್.ಆರ್.ಪಾಟೀಲ್, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ, ಸಂಸದರು, ಶಾಸಕರು, ಸಂಘಟನೆಗಳ ಮುಖ್ಯಸ್ಥರು, ನೂತನವಾಗಿ ನೇಮಕವಾಗಿರುವ ಜಿಲ್ಲಾ ಪ್ರಚಾರ ಸಮಿತಿಗಳ ಅಧ್ಯಕ್ಷರು ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.