ಬೆಂಗಳೂರು: ವ್ಯಕ್ತಿಯ ಕೊಲೆ
Update: 2018-01-30 22:33 IST
ಬೆಂಗಳೂರು, ಜ.30: ಶಾಲೆಯೊಂದರ ಸ್ವಚ್ಛತೆ ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಹೆಗ್ಗನಹಳ್ಳಿ ಸರಕಾರಿ ಶಾಲೆಯಲ್ಲಿ ಸ್ವಚ್ಛತೆಯ ಕೆಲಸ ಮಾಡುತ್ತಿದ್ದ ಬಾಬಾಸಾಬ್(75) ಎಂಬುವರು ಕೊಲೆಯಾದ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದಾರೆ.
ಸೋಮವಾರ ಸಂಜೆ ಶಾಲೆಯ ಸ್ವಚ್ಛತೆ ನಿರ್ವಹಣೆ ಮಾಡುತ್ತಿದ್ದ ಬಾಬಾಸಾಬ್ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ತಿಳಿದ ರಾಜಗೋಪಾಲನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.