ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಪ್ರತಿಭಟನೆ
Update: 2018-01-30 22:34 IST
ಬೆಂಗಳೂರು, ಜ.30: ಗುತ್ತಿಗೆದಾರರ ಮೇಲೆ ಬಿಬಿಎಂಪಿ ಸದಸ್ಯೆ ಶಿಲ್ಪಾಅವರ ಪತಿ ಶ್ರೀಧರ್ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಗುತ್ತಿಗೆದಾರರು ಪ್ರತಿಭಟನೆ ನಡೆಸಿದರು.
ಮಂಗಳವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಗುತ್ತಿಗೆದಾರರ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿರುವ ಶಿಲ್ಪಾಶ್ರೀಧರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಸಿದರು.
ಈ ವೇಳೆ ಮಾತನಾಡಿದ ಸಂಘದ ಪದಾಧಿಕಾರಿಗಳು ಹಲವಾರು ವರ್ಷಗಳಿಂದ ನಮಗೆ ಬಿಲ್ ಬಿಡುಗಡೆಯಾಗುತ್ತಿಲ್ಲ. ಸಾಲ ಹಾಗೂ ಒಡವೆಗಳನ್ನು ಒತ್ತೆ ಇಟ್ಟು ನಗರದ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತಿದ್ದೇವೆ. ಇಂತಹ ಗುತ್ತಿಗೆದಾರರ ಮೇಲೆ ಸದಸ್ಯರ ಪತಿ ಹಲ್ಲೆ ಮಾಡಿರುವುದು ಖಂಡನೀಯ ಎಂದರು.