ಮಾಸ್ತಿಕಟ್ಟೆ: ಸಾರ್ವಜನಿಕ ರಕ್ತದಾನ ಶಿಬಿರ, ಸನ್ಮಾನ
Update: 2018-01-31 17:54 IST
ಉಳ್ಳಾಲ, ಜ. 31: ಮಾಸ್ತಿಕಟ್ಟೆಯಲ್ಲಿ ಜರಗಿದ ಮೇಲಂಗಡಿ ಕ್ರಿಕೆಟ್ ಕ್ಲಬ್, ಆಝಾದ್ ಫ್ರೆಂಡ್ಸ್ ಸರ್ಕಲ್ ಹಾಗೂ ಉಳ್ಳಾಲ ವಲಯದ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ದೇರಳಕಟ್ಟೆ ಯೆನೆಪೊಯ ಆಸ್ಪತ್ರೆ ಇದರ ಸಹಯೋಗದೊಂದಿಗೆ ದ್ವಿತೀಯ ಸಂಭ್ರಮ ಮತ್ತು ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರದಲ್ಲಿ ಸಚಿವ ಯು.ಟಿ. ಖಾದರ್ ಅವರ ಆಪ್ತ ಕಾರ್ಯದರ್ಶಿ ಮುಹಮ್ಮದ್ ಲಿಬ್ಝತ್ ಅವರನ್ನು ಸನ್ಮಾನಿಸಲಾಯಿತು.
ಈ ವೇಳೆ ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞಿಮೋನು, ಎಸ್ ವೈಎಸ್ ದ.ಕ. ಜಿಲ್ಲಾ ಕೋಶಾಧಿಕಾರಿ ಹನೀಫ್ ಬಿ.ಜಿ., ಮೇಲಂಗಡಿ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಯಹ್ಯಾ ಬಿಲಾಲ್ ಮುಂತಾದವರು ಉಪಸ್ಥಿತರಿದ್ದರು.